ಸಿಡ್ನಿ: ಆಗಸ್ಟ್ ನಲ್ಲಿ ಭಾರತ ವಿರುದ್ಧ ನಡೆಯಲಿರುವ ಟೆಸ್ಟ್ ಕ್ರಿಕೆಟ್ ಸರಣಿ ನಂತರ ಟೆಸ್ಟ್ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸುವುದಾಗಿ ಶ್ರೀಲಂಕಾದ ವಿಕೆಟ್ ಕೀಪರ್ ಕುಮಾರ್ ಸಂಗಕ್ಕಾರ ಹೇಳಿದ್ದಾರೆ.
37 ವರ್ಷದ ಸಂಗಕ್ಕಾರ ಇದಾಗಲೆ ಅಂತರಾಷ್ಟ್ರೀಯ ಏಕದಿನ ಹಾಗೂ ಟ್ವಿ-20 ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದರು. 2014ರ ಟ್ವಿ-20 ವಿಶ್ವಕಪ್ ಜಯದ ಬಳಿಕೆ ಟ್ವಿ-20ಗೆ ನಿವೃತ್ತಿ ಘೋಷಿಸಿದ್ದರು. ಅಲ್ಲದೆ ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಪಂದ್ಯಾವಳಿಯ ನಂತರ ಏಕದಿನ ಕ್ರಿಕೆಟ್ ಬದುಕಿನಿಂದ ನಿವೃತ್ತಿಯಾಗಲಿದ್ದಾರೆ.
ಜೂನ್ ಮತ್ತು ಜುಲೈನಲ್ಲಿ ಕೆಲವೊಂದು ಟೆಸ್ಟ್ ಪಂದ್ಯಗಳು ನಡೆಯಲಿದೆ. ನಂತರ ಆಗಸ್ಟ್ ನಲ್ಲಿ ಭಾರತ ವಿರುದ್ಧ 3 ಟೆಸ್ಟ್ ಪಂದ್ಯಗಳು ನಡೆಯಲಿದ್ದು ಇದಾದ ಬಳಿಕ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ.
130 ಟೆಸ್ಟ್ ಪಂದ್ಯಗಳನ್ನು ಆಡಿರುವ ಸಂಗಕ್ಕಾರ 12.203 ರನ್ ಗಳಿಸಿದ್ದಾರೆ. ಟೆಸ್ಟ್ ನಲ್ಲಿ 38 ಶತಕ ಹಾಗೂ 51 ಅರ್ಧ ಶತಕಗಳನ್ನು ದಾಖಲಿಸಿದ್ದಾರೆ. 12.000 ಸಾವಿರ ಕ್ಲಬ್ ಸೇರಿದ 5ನೇ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.