ಮಿಸ್ಬಾ ಉಲ್ ಹಕ್-ಶಾಹಿದ್ ಅಫ್ರಿದಿ 
ಕ್ರೀಡೆ

ಏಕದಿನ ಕ್ರಿಕೆಟ್ ಗೆ ಮಿಸ್ಬಾ ಉಲ್ ಹಕ್, ಅಫ್ರಿದಿ ಗುಡ್ ಬೈ

ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಮಿಸ್ಬಾ ಉಲ್ ಹಕ್ ಹಾಗೂ ಶಹೀದ್ ಅಫ್ರಿದಿ ಅವರು ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ...

ಅಡಿಲೇಡ್: ಪಾಕಿಸ್ತಾನ ಕ್ರಿಕೆಟ್ ತಂಡದ  ನಾಯಕ ಮಿಸ್ಬಾ ಉಲ್ ಹಕ್ ಹಾಗೂ ಶಹೀದ್ ಅಫ್ರಿದಿ ಅವರು ಏಕದಿನ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

ಶಹೀದ್ ಅಫ್ರಿದಿ ಅವರು ವಿಶ್ವಕಪ್ ಟೂರ್ನಿಯ ನಂತರ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳುವ ಬಗ್ಗೆ ಮೊದಲೇ ಘೋಷಿಸಿದ್ದರು. ಅದರೆ, ನಾಯಕ ಮಿಸ್ಬಾ ಉಲ್ ಹಕ್ ನಿವೃತ್ತಿ ಘೋಷಣೆ ಮಾಡಿರುವುದು ಅವರ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. ಕೊನೆ ಪಂದ್ಯದಲ್ಲಿ ಮಿಸ್ಬಾ ಉಲ್ ಹಕ್ 34ರನ್ ಗಳಿಸಿ ಔಟ್ ಆಗಿದ್ದರು.

162 ಏಕದಿನ ಕ್ರಿಕೆಟ್ ಪಂದ್ಯಗಳನ್ನಾಡಿರುವ 40 ವರ್ಷ ವಯಸ್ಸಿನ ಮಿಸ್ಬಾ ಉಲ್ ಹಕ್ ಅವರು ಈ ವರೆಗೂ ಒಂದೇ ಒಂದು ಶತಕ ಸಿಡಿಸಿಲ್ಲ. ಇದರ ಹೊರತಾಗಿಯೂ ನಿವೃತ್ತಿ ಘೋಷಣೆ ಮಾಡಿರುವುದು ಅಭಿಮಾನಿಗಳಿಗೆ ಇನ್ನೂ ಬೇಸರ ತರಿಸಿದೆ. ಏಕದಿನ ಕ್ರಿಕೆಟ್ ನಲ್ಲಿ ಒಟ್ಟು 42 ಅರ್ಧಶತಕ ಬಾರಿಸಿರುವ ಮಿಸ್ಬಾ ಉಲ್ ಹಕ್ ಅವರು 5,122 ರನ್ ಗಳಿಸಿದ್ದಾರೆ. ಶತಕ ಬಾರಿಸದೆ 5,000 ಪ್ಲಸ್ ರನ್ ಗಳಿಸಿದ ಸಾಧನೆ ಮಾಡಿದ್ದಾರೆ. 2001ರಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಪಂದ್ಯವಾಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿಗೆ ಮಿಸ್ಬಾ ಕಾಲಿಟ್ಟರು.

35 ವರ್ಷ ವಯಸ್ಸಿನ ಆಲ್ ರೌಂಡರ್ ಅಫ್ರಿದಿ ಅವರು 398 ಏಕದಿನ ಪಂದ್ಯಗಳನ್ನಾಡಿದ್ದು, ಒಟ್ಟು 8,064 ರನ್ ಗಳಿಸಿದ್ದಾರೆ. ಅಲ್ಲದೆ ಪ್ರಮುಖ ಸ್ಪಿನ್ನರ್ ಆಗಿಯೂ ಗುರುತಿಸಿಕೊಂಡಿದ್ದ ಅವರು 395 ವಿಕೆಟ್ ಗಳನ್ನು ಕಬಳಿಸಿದ್ದಾರೆ. ಇವಿಷ್ಟೇ ಅಲ್ಲದೆ ಸ್ವತಃ ಪಾಕಿಸ್ತಾನ ತಂಡದ ನಾಯಕರಾಗಿದ್ದ ಅವರು 2011ರ ವಿಶ್ವಕಪ್ ನಲ್ಲಿ ತಂಡವನ್ನು ಮುನ್ನಡೆಸಿದ್ದರು. ಮೊಹಾಲಿಯಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಚಾಂಪಿಯನ್ ಟೀಂ ಇಂಡಿಯಾ ವಿರುದ್ಧ ಅಫ್ರಿದಿ ಪಡೆ ಸೋಲು ಕಂಡಿತ್ತು.

ಮಿಸ್ಬಾ ಉಲ್ ಹಕ್ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ ಮುಂದುವರೆಯಲಿದ್ದು, ಅಫ್ರಿದಿ ಅವರು ಟಿ20 ಕ್ರಿಕೆಟ್ ನಲ್ಲಿ ಆಡಲಿದ್ದಾರೆ. 1996ರಲ್ಲಿ ಶ್ರೀಲಂಕಾ ವಿರುದ್ಧ 37 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಅತಿ ವೇಗದ ಶತಕ ಸಾಧನೆ ಮಾಡಿದ ಆಟಗಾರ ಎಂಬ ಕೀರ್ತಿಗೆ ಅಫ್ರಿದಿ ಭಾಜನರಾಗಿದ್ದರು. ಕ್ರಿಕೆಟ್ ಜಗತ್ತಿನಲ್ಲಿ  'ಬೂಮ್ ಬೂಮ್ ಅಫ್ರಿದಿ' ಎಂದೇ ಖ್ಯಾತಿ ಪಡೆದಿದ್ದ ಅಫ್ರಿದಿ ಅವರ ಅನೇಕ ಏಕದಿನ ಇನ್ನಿಂಗ್ಸ್ ಗಳನ್ನು ಕ್ರೀಡಾಭಿಮಾನಿಗಳ ಮೆಚ್ಚುಗೆ ಪಡೆದಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT