ಸಿಡ್ನಿ: ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವಿನ 2ನೇ ಸೆಮಿಫೈನಲ್ ಪಂದ್ಯ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯಲಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಆಸ್ಟ್ರೇಲಿಯಾ ಪರ ಆರಂಭಿಕರಾಗಿ ಕಣಕ್ಕೀಳಿದ ಡೇವಿಡ್ ವಾರ್ನರ್ ಭರ್ಜರಿ ಸಿಕ್ಸರ್ ಸಿಡಿಸಿ ಬೃಹತ್ ಮೊತ್ತ ಕಲೆ ಹಾಕುವ ನಿರೀಕ್ಷೆ ಮೂಡಿಸಿದರು. ಆದರೆ 12 ರನ್ ಗಳಿಸಿದ್ದ ವೇಳೆ ಉಮೇಶ್ ಯಾದವ್ ರ ಮಾರಕ ಬೌಲಿಂಗ್ ದಾಳಿಗೆ ಔಟಾಗಿ ಪೆವಿಲಿಯನ್ ಸೇರಿದರು.
ವಿಶ್ವಕಪ್ ಟೂರ್ನಿಯ 2ನೇ ಸೆಮಿಫೈನಲ್ ನಲ್ಲಿ ಎರಡು ಬಲಿಷ್ಠ ತಂಡಗಳು ಸೆಣಸಲಿದ್ದು, ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ. ನಿರೀಕ್ಷೆಗೂ ಮೀರಿದ ಟೀಂ ಅಭಿಮಾನಿಗಳು ಸಿಡ್ನಿ ಕ್ರೀಡಾಂಗಣದಲ್ಲಿ ಜಮಾಯಿಸಿದ್ದಾರೆ.