ಎಚ್ಎಸ್ ಪ್ರಣಯ್ 
ಕ್ರೀಡೆ

ಪ್ರಣಯ್ ಗೆ ಗೆಲವು, ಕಶ್ಯಪ್‍ಗೆ ಸೋಲು

ಭಾರತದ ಯುವ ಬ್ಯಾಡ್ಮಿಂಟನ್ ಆಟಗಾರ ಎಚ್.ಎಸ್ ಪ್ರಣಯ್, ಇಂಡಿಯ್ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ...

ನವದೆಹಲಿ: ಭಾರತದ ಯುವ ಬ್ಯಾಡ್ಮಿಂಟನ್ ಆಟಗಾರ ಎಚ್.ಎಸ್ ಪ್ರಣಯ್, ಇಂಡಿಯ್ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ದೊಡ್ಡ ಗೆಲವು ದಾಖಲಿಸಿದ್ದಾರೆ. ಇನ್ನು ಭಾರತದ ಹಿರಿಯ ಬ್ಯಾಡ್ಮಿಂಟನ್ ಆಟಗಾರ ಪಿ.ಕಶ್ಯಪ್ ಸೋಲನುಭವಿಸುವ ಮೂಲಕ ಟೂರ್ನಿಯಿಂದ ಹೊರ ಬಿದ್ದಿದ್ದಾರೆ.

ಸಿರಿ ಫೋರ್ಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ 17ನೇ ರ್ಯಾಂಕಿಂಗ್‍ನ ಪ್ರಣಯ್, ಪ್ರಶಸ್ತಿ ಗೆಲ್ಲುವ ಫೇವರಿಟ್ ಆಟಗಾರ ಎಂದೇ ಬಿಂಬಿತವಾಗಿರುವ 2ನೇ ರ್ಯಾಂಕಿಂಗ್‍ನ ಜಾನ್ ಒ ಜೊರ್ಗೆನ್ಸನ್ ಅವರನ್ನು ಮಣಿಸುವ ಮೂಲಕ ಅಚ್ಚರಿಯ ಫಲಿತಾಂಶ ನೀಡಿದ್ದಾರೆ. ಈ ಮೂಲಕ ಪ್ರಣಯ್ ಅಂತಿಮ ಎಂಟರ ಘಟ್ಟಕ್ಕೆ ಪ್ರವೇಶಿಸಿದ್ದಾರೆ. ಆರಂಭದಲ್ಲಿ ಮುಗ್ಗರಿಸಿದರೂ ನಂತರ ಹೋರಾಟಕಾರಿ ಪ್ರದರ್ಶನ ನೀಡಿದ ಪ್ರಣಯ್ 18-21, 21-14, 21-14 ಗೇಮ್ ಗಳ ಅಂತರದಲ್ಲಿ ಗೆಲವು ದಾಖಲಿಸಿದರು.

ಇನ್ನು ಕಶ್ಯಪ್, ಚೀನಾದ ಕ್ಯೂ ಸಾಂಗ್ ವಿರುದ್ಧ 17-21, 21-11 ಗೇಮ್ ಗಳ ಅಂತರದಲ್ಲಿ ಸೋಲನುಭವಿಸಿದರು. ಇನ್ನು ಸೈನಾ ನೆಹ್ವಾಲ್ ತಮ್ಮ ಎದುರಾಳಿ ರಾಷ್ಟ್ರೀಯ ಚಾಂಪಿಯನ್ ರುತ್ವಿಕಾ ಶಿವಾನಿ ವಿರುದ್ಧ 21-16, 21-17 ಗೇಮ್ ಗಳ ಅಂತರದಲ್ಲಿ ಗೆದ್ದರು. ಕೆ.ಶ್ರೀಕಾಂತ್ ಎದುರಾಳಿ ಜಪಾನ್‍ನ ಕೆಂಟೊ ಮೊಮೊಟ ವಿರುದ್ಧ 21-12, 15-21, 21-15 ಗೇಮ್ ಗಳ ಅಂತರದಲ್ಲಿ ಗೆದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT