ಸೈನಾ ಈಗ ವಿಶ್ವದ ನಂ.1 ಬ್ಯಾಡ್ಮಿಂಟನ್ ತಾರೆ
ಶನಿವಾರ ಇಂಡಿಯನ್ ಓಪನ್ ಸೂಪರ್ ಸೀರೀಸ್ ಸೆಮಿಫೈನಲ್ ನಲ್ಲಿ ಕರೋಲಿನಾ ಮರೀನ್ ಪರಾಭವಗೊಂಡ ಕಾರಣ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ನಂಬರ್ 1 ಪಟ್ಟಕ್ಕೇರಿದ್ದಾರೆ.
ನವದೆಹಲಿ: ಶನಿವಾರ ಇಂಡಿಯನ್ ಓಪನ್ ಸೂಪರ್ ಸೀರೀಸ್ ಸೆಮಿಫೈನಲ್ ನಲ್ಲಿ ಕರೋಲಿನಾ ಮರೀನ್ ಪರಾಭವಗೊಂಡ ಕಾರಣ ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ನಂಬರ್ 1 ಪಟ್ಟಕ್ಕೇರಿದ್ದಾರೆ.
ಪ್ರಸ್ತುತ ಎರಡನೇ ಸೆಮಿಫೈನಲ್ನಲ್ಲಿ ಸೈನಾ ಜಪಾನ್ನ ಯೂ ಹಷಿಮೊಟೋ ಅವರನ್ನು ಎದುರಿಸಲಿದ್ದಾರೆ.
ಪುರುಷರ ಬ್ಯಾಡ್ಮಿಂಟನ್ನಲ್ಲಿ ಪ್ರಕಾಶ್ ಪಡುಕೋಣೆ ನಂಬರ್ 1 ಸ್ಥಾನ ಪಡೆದ ಮೊದಲ ಭಾರತೀಯನಾಗಿದ್ದಾರೆ. ಅದೇ ವೇಳೆ ಅಗ್ರ ಸ್ಥಾನಕ್ಕೇರಿರುವ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಸೈನಾ ಪಾತ್ರರಾಗಿದ್ದಾರೆ.
ಸೈನಾ ಸಾಧನೆ ಶ್ಲಾಘಿಸಿದ ಪ್ರಧಾನಿ ಮೋದಿ
ವಿಶ್ವ ಬ್ಯಾಡ್ಮಿಂಟನ್ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಸೈನಾ ನೆಹ್ವಾಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದು, ಸೈನಾ ಅವರು ದೇಶವೇ ಹೆಮ್ಮೆ ಪಡುವಂತ ಸಾಧನೆ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.