ಸೈನಾ ನೆಹ್ವಾಲ್ (ಸಂಗ್ರಹ ಚಿತ್ರ) 
ಕ್ರೀಡೆ

ಸೆಮಿ ಫೈನಲ್‍ಗೆ ಸೈನಾ

ಭಾರತದ ಅಗ್ರ ಶ್ರೇಯಾಂಕದ ಶಟ್ಲರ್ ಸೈನಾ ನೆಹ್ವಾಲ್, ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್ ತಲುಪಿದ್ದಾರೆ...

ನವದೆಹಲಿ: ಭಾರತದ ಅಗ್ರ ಶ್ರೇಯಾಂಕದ ಶಟ್ಲರ್ ಸೈನಾ ನೆಹ್ವಾಲ್, ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಸೆಮಿಫೈನಲ್ ತಲುಪಿದ್ದಾರೆ.

ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಅವರು, ಇಂಡೋನೇಷ್ಯಾದ ಹನಾ ರಮಧಿನಿ ವಿರುದ್ಧ 21-15, 21-12 ಗೇಮ್ ಗಳ ಅಂತರದಲ್ಲಿ ಸೋಲಿಸಿ ಇದೇ ಮೊದಲ ಬಾರಿಗೆ ಈ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದರು. ಆದರೆ, ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತಕ್ಕೆ ಶುಕ್ರವಾರ ನಿರಾಸೆ ತಂದಿತು. ಬುಧವಾರವಷ್ಟೇ ತಮ್ಮ ಪ್ರೀ ಕ್ವಾರ್ಟರ್ ಫೈನಲ್ ಹಂತದ ಪಂದ್ಯದಲ್ಲಿ ವಿಶ್ವದ 2ನೇ ಶ್ರೇಯಾಂಕದ ಜಾನ್ ಜಾರ್ಗೆನ್ಸನ್ (ಡೆನ್ಮಾರ್ಕ್) ಅವರನ್ನು ಸೋಲಿಸುವ ಮೂಲಕ ದೈತ್ಯ ಸಂಹಾರಿ ಎಂದು ಪರಿಗಣಿಸಲ್ಪಟ್ಟಿದ್ದ ಎಚ್.ಎಸ್. ಪ್ರಣಯ್, ಕ್ವಾರ್ಟರ್ ಫೈನಲ್‍ನಲ್ಲಿ ತಮ್ಮ ಪಯಣ ಅಂತ್ಯಗೊಳಿಸಿದರು.

ವಿಶ್ವದ 6ನೇ ಶ್ರೇಯಾಂಕಿತ ವಿಕ್ಟರ್ ಆಕ್ಸೆಲ್ಸನ್ ವಿರುದ್ಧ ಸೆಣಸಿದ ಅವರು, 16-21, 21-9, 21-8 ಗೇಮ್ ಗಳ ಅಂತರದಲ್ಲಿ ಸೋಲು ಕಂಡರು. ಇನ್ನು, ಪುರುಷರ ಸಿಂಗಲ್ಸ್ ವಿಭಾಗದ
ಮತ್ತೊಂದು ಪಂದ್ಯದಲ್ಲಿ ಕದನಕ್ಕಿಳಿದಿದ್ದ ಕಾಮನ್ವೆಲ್ತ್ ಕಂಚಿನ ಪದಕ ವಿಜೇತ ಭಾರತದ ಗುರುಸಾಯಿದತ್, ಚೀನಾದ ಕ್ಸೆ ಸಾಂಗ್ ವಿರುದಟಛಿ 21-15, 18-21, 13-21 ಗೇಮïಗಳ ಅಂತರದಲ್ಲಿ ಪರಾಭವ ಹೊಂದಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?