ಬ್ರಿಸ್ಟೊನ್: ಇಂಗ್ಲೆಂಡ್ ತಂಡದ ಬ್ಯಾಟ್ಸ್‍ಮನ್ ಜೊನಾಥನ್ ಟ್ರಾಟ್ ಅವರು ತಮ್ಮ ಅಂತಾರಾಷ್ಟ್ರೀಯ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದಾರೆ.
ಭಾನುವಾರ ಮುಕ್ತಾಯಗೊಂಡ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಅವರು ಈ ವಿಚಾರ ತಿಳಿಸಿದರು. 2009ರ ಆಗಸ್ಟ್ ನಲ್ಲಿ ನಡೆದಿದ್ದ ಆ್ಯಶಸ್ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಅವರು ಪದಾರ್ಪಣೆ ಮಾಡಿದ್ದರು. 2010ರ ಮೇ ತಿಂಗಳಲ್ಲಿ ನಡೆದಿದ್ದ ಬಾಂಗ್ಲಾದೇಶ ವಿರುದಟಛಿದ ಸರಣಿಯಲ್ಲಿ 226 ರನ್ ಚಚ್ಚಿದ್ದರು. ಅದು ಅವರ ಟೆಸ್ಟ್ ವೃತ್ತಿಜೀವನದ ಗರಿಷ್ಠ ಮೊತ್ತವಾಗಿದೆ.
ಕಳೆದ ತಿಂಗಳ 13ರಿಂದ ಆರಂಭಗೊಂಡಿದ್ದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದ ಅವರು, ಉತ್ತಮ ಪ್ರದರ್ಶನ ನೀಡಿರಲಿಲ್ಲ. ಆರು ಇನಿಗ್ಸ್ ಗಳಲ್ಲಿ ಅವರು ಗಳಿಸಿದ್ದು ಮೂರು ಡಕ್‍ಔಟ್ ಸಹಿತ ಕೇವಲ 72 ರನ್.