ಮಾಜಿ ಕ್ರಿಕೆಟಿಗ ಕೀರ್ತಿ ಅಜಾದ್ (ಸಂಗ್ರಹ ಚಿತ್ರ) 
ಕ್ರೀಡೆ

ದೆಹಲಿ ಕ್ರಿಕೆಟ್ ಮಂಡಳಿಗೆ ಭ್ರಷ್ಟಾಚಾರದ ಪಿಎಚ್ ಡಿ: ಕೀರ್ತಿ ಅಜಾದ್

ದೆಹಲಿ ಕ್ರಿಕೆಟ್ ಮಂಡಳಿಗೆ ಭ್ರಷ್ಟಾಚಾರದ ಪಿಎಚ್ ಡಿ ಕೊಡಬೇಕು ಎಂದು ಮಾಜಿ ಕ್ರಿಕೆಟಿಗ ಮತ್ತು ಸಂಸದ ಕೀರ್ತಿ ಅಜಾದ್ ಹೇಳಿದ್ದಾರೆ.

ನವದೆಹಲಿ: ದೆಹಲಿ ಕ್ರಿಕೆಟ್ ಮಂಡಳಿಗೆ ಭ್ರಷ್ಟಾಚಾರದ ಪಿಎಚ್ ಡಿ ಕೊಡಬೇಕು ಎಂದು ಮಾಜಿ ಕ್ರಿಕೆಟಿಗ ಮತ್ತು ಸಂಸದ ಕೀರ್ತಿ ಅಜಾದ್ ಹೇಳಿದ್ದಾರೆ.

ದೆಹಲಿ ಕ್ರಿಕೆಟ್ ಆಡಳಿತ ಮಂಡಳಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮೊದಲಿನಿಂದ ಆರೋಪಿಸುತ್ತಾ ಬಂದಿರುವ ಕೀರ್ತಿ ಅಜಾದ್ ಅವರು ಇಂದು ದೆಹಲಿ ಕ್ರಿಕೆಟ್ ಮಂಡಳಿಯ ವಿರುದ್ಧ ವ್ಯಾಪಕ ಟೀಕಾ ಪ್ರಹಾರವನ್ನೇ ನಡೆಸಿದ್ದಾರೆ. ಶುಕ್ರವಾರ ಮಾಧ್ಯಮ ಸಂಸ್ಥೆಯೊಂದಿಗೆ ಮಾತನಾಡಿದ ಅವರು,  "ದೆಹಲಿ ಕ್ರಿಕೆಟ್ ಮಂಡಳಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಬಹುಶಃ ಆಡಳಿತ ಮಂಡಳಿಯ ಸಿಬ್ಬಂದಿಗಳಿಗೆ ಭ್ರಷ್ಟಾಚಾರದ ಪಿಎಚ್ ಡಿ ನೀಡಬಹುದು.ದಶಕಗಳಿಂದಲೂ ಕ್ರಿಕೆಟ್ ಮಂಡಳಿಯಲ್ಲಿ ಭ್ರಷ್ಟಾಚಾರವನ್ನು ಕಾನೂನು ಮಾಡಲಾಗಿದೆ. ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಕೇವಲ 15 ವರ್ಷಗಳಲ್ಲಿ  ಸುಮಾರು 150 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿದರು.

ಅಲ್ಲದೆ ಭ್ರಷ್ಟಾಚಾರದ ಕುರಿತು ಮಾಧ್ಯಮಗಳ ವರದಿ ಕುರಿತು ಮಾತನಾಡಿದ ಅವರು, "ಇವೆಲ್ಲವೂ ಕೂಡ ಬಹಿರಂಗ ರಹಸ್ಯಗಳಾಗಿದ್ದು, ವಿವಿಧ ಮ್ಯಾಗಜೀನ್ ಗಳಲ್ಲಿ ಈ ಬಗ್ಗೆ ನಿಮಗೆ ಮಾಹಿತಿ ದೊರೆಯುತ್ತದೆ. ನನ್ನ ತಂಡದ ಕೆಲವರು ಕಳೆದ ಹಲವು ವರ್ಷಗಳಿಂದ ಈ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಹೀಗಾಗಿ ಸರ್ಕಾರ ಈ ಕೂಡಲೇ ಈ ಬಗ್ಗೆ ಕಠಿಣ ನಿರ್ಧಾರ ಕೈಗೊಳ್ಳಬೇಕು . ಆ ಮೂಲಕ ಇತರೆ ಕ್ರಿಕೆಟ್ ಮಂಡಳಿಗಳಿಗೆ ಎಚ್ಚರಿಕೆ ನೀಡಬೇಕು. ಸರಣಿ ಭ್ರಷ್ಟಾಚಾರ ಪ್ರಕರಣಗಳಲ್ಲಿ ಪಾಲ್ಗೊಂಡಿರುವವರನ್ನು ಕೂಡಲೇ ಶಿಕ್ಷಿಸಬೇಕು" ಎಂದು ಕೀರ್ತಿ ಅಜಾದ್ ಹೇಳಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ದೆಹಲಿ ಕ್ರಿಕೆಟ್ ಮಂಡಳಿ ವಿರುದ್ಧ ವ್ಯಾಪಕ ಭ್ರಷ್ಟಾಚಾರ ಆರೋಪಗಳು ಕೇಳಿಬರುತ್ತಿದ್ದು, ಪ್ರಮುಖವಾಗಿ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ ಕೀರ್ತಿ ಅಜಾದ್ ಅವರು ಬಹಳ ಗಟ್ಟಿಯಾಗಿ ಆರೋಪ ಮಾಡುತ್ತಿದ್ದಾರೆ. ಕೇಂದ್ರ ಸಚಿವ ಮತ್ತು ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರು ದೆಹಲಿ ಕ್ರಿಕೆಟ್ ಮಂಡಳಿ ನೇತೃತ್ವ ವಹಿಸಿದ್ದು, ಅವರ ವಿರುದ್ಧವೇ ಕೀರ್ತಿ ಅಜಾದ್ ಅವರು ಆರೋಪ ಮಾಡುತ್ತಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ