ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ಸರಣಿ 
ಕ್ರೀಡೆ

ಭಾರತ, ಪಾಕ್ ಮೊದಲ ಟೆಸ್ಟ್ ಕೋಲ್ಕತಾದಲ್ಲಿ?

ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ಸರಣಿ ಆಡುವುದಾದರೆ, ಭಾರತದಲ್ಲೇ ನಡೆಸಲು ಬಿಸಿಸಿಐ ಜಗಮೋಹನ್ ದಾಲ್ಮಿಯಾ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ...

ನವದೆಹಲಿ : ಭಾರತ ಹಾಗೂ  ಪಾಕಿಸ್ತಾನ ಕ್ರಿಕೆಟ್ ಸರಣಿ ಆಡುವುದಾದರೆ,  ಭಾರತದಲ್ಲೇ ನಡೆಸಲು ಬಿಸಿಸಿಐ ಜಗಮೋಹನ್ ದಾಲ್ಮಿಯಾ  ಪಟ್ಟು ಹಿಡಿದಿದ್ದಾರೆ. ಒಂದು ವೇಳೆ
ಈ ¸ಸರಣಿ  ನಿರ್ಧಾರವಾದರೆ ಮೊದಲ ಟೆಸ್ಟ್  ಪಂದ್ಯವನ್ನು ಕೋಲ್ಕತಾದಲ್ಲಿ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಕಳೆದ ಭಾನುವಾರ ಭಾರತಕ್ಕೆಆಗಮಿಸಿದ್ದ ಪಿಸಿಬಿ ಅಧ್ಯಕ್ಷ ಶಹರಿಯಾರ್ ಖಾನ್, ಮುಂಬರುವ ಡಿಸೆಂಬರ್‍ನಲ್ಲಿ ಭಾರತದೊಂದಿಗೆ ಸರಣಿ ಆಯೋಜಿಸುವ ಇಂಗಿತ ವ್ಯಕ್ತಪಡಿಸಿದ್ದರು. ಅಲ್ಲದೆ ಸರಣಿಯನ್ನು ಯುಎಇನಲ್ಲಿ ನಡೆಸುವ ಪ್ರಸ್ತಾಪವನ್ನು ಬಿಸಿಸಿಐ ಮುಂದಿಟ್ಟಿದ್ದರು. ಸರಣಿಯ ಆಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ಪ್ರಮುಖವಾಗಿದೆ. ಆದರೂ ಭಾರತ ಹಾಗೂ ಪಾಕಿಸ್ತಾನ ಕ್ರಿಕೆಟ್ ತಂಡಗಳ ಕದನವನ್ನು ವಿಶ್ವವೇ ಕಾತುರದಿಂದ ಕಾಯುತ್ತಿದೆ ಎಂದು ಪಿಸಿಬಿ ಅಧ್ಯಕ್ಷ ತಿಳಿಸಿದ್ದರು. ಪಿಸಿಬಿ ಅಧ್ಯಕ್ಷ ಖಾನ್ ಬಿಜೆಪಿ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರೊಂದಿಗೂ ಸಹ ಚರ್ಚೆ ನಡೆಸಿದ್ದಾರೆ. ಈ ಮಾತುಕತೆ ವೇಳೆ ಉಭಯ ಮಂಡಳಿಗಳು ಪ್ರಸಾರಕರು ಹಾಗೂ ಇತರೆ ವಿಷಯಗಳ ಕುರಿತು ಒಮ್ಮತ ನಿರ್ಧಾರಕ್ಕೆ ಬರುವಂತೆ ಜೇಟ್ಲಿ ಸೂಚಿಸಿದ್ದಾರೆ ಎಂದು ವರದಿಗಳು ಬಂದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!