ರಾಂಚಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಹಣಾಹಣಿ ನಡೆಯುತ್ತಿದ್ದು, ಮೊದಲ ಬ್ಯಾಟ್ ಮಾಡಿದ ಆರ್ಸಿಬಿಯ ಪ್ರಮುಖ ಮೂರು ವಿಕೆಟ್ ಗಳು ಪತನಗೊಂಡು ಸಂಕಷ್ಟಕ್ಕೆ ಸಿಲುಕಿದೆ.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನ ನಾಯಕ ಮಹೇಂದ್ರ ಸಿಂಗ್ ಧೋನಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಇಳಿದ ಆರ್ಸಿಬಿ ಪರ ವಿರಾಟ್ ಕೊಹ್ಲಿ ಕೇವಲ 12 ರನ್ ಗಳಿಸಿ ಔಟಾದರು. ನಂತರ ಬಂದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ 1 ರನ್ ಗಳಿಸಿ ಔಟಾಗಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.
ನಂತರ ಬಂದ ಮಂದೀಪ್ ಸಿಂಗ್ ಸಹ ಬಂದ ದಾರಿಗೆ ಸುಂಕವಿಲ್ಲದ ಹಾಗೇ 4 ರನ್ ಗಳಿಸಿ ಔಟಾಗಿ ಪೆವಿಲಿಯನ್ ಸೇರಿದರು. ಸದ್ಯ ಕ್ರಿಸ್ ನಲ್ಲಿರುವ ಕ್ರಿಸ್ ಗೇಯ್ಲ್ 23 ರನ್ ಗಳಿಸಿದ್ದರೆ. ದಿನೇಶ್ ಕಾರ್ತಿಕ್ 4 ರನ್ ಗಳಿಸಿ ಆಟವಾಡುತ್ತಿದ್ದಾರೆ. 10 ಓವರ್ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 46 ರನ್ ಗಳಿಸಿರುವ ಆರ್ಸಿಬಿ.
ಚೆನ್ನೈ ಸೂಪರ್ ಕಿಂಗ್ಸ್ ಪರ ಆಸೀಸ್ ನೇಹ್ರಾ 2 ವಿಕೆಟ್, ಆರ್. ಅಶ್ವಿನ್ 1 ವಿಕೆಟ್ ಗಳಿಸಿದ್ದಾರೆ.