ರಾಂಚಿಯಲ್ಲಿ ನಡೆದ ಐಪಿಎಲ್ ನ ಸೆಮಿ ಫೈನಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಮಂದೀಪ್ ಸಿಂಗ್ ಅವರ ವಿಕೆಟ್ ನ್ನು ಗಳಿಸಿದ ಖುಷಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮೈಕೆಲ್ ಹ 
ಕ್ರೀಡೆ

ಫೈನಲ್ ಗೆ ಚೆನ್ನೈ ಸೂಪರ್ ಕಿಂಗ್ಸ್

ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ 3 ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಗೆ ಸೋಲುಣಿಸಿ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದೆ...

ರಾಂಚಿ:ಎಂಟನೇ ಆವೃತ್ತಿಯ ಐಪಿಎಲ್ ಟಿ -20 ಪಂದ್ಯಾವಳಿಯಲ್ಲೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಚೊಚ್ಚಲ ಬಾರಿಗೆ ಪ್ರಶಸ್ತಿ ಎತ್ತಿ ಹಿಡಿಯುವ ಕನಸಿಗೆ ಭಂಗ ತಂದುಕೊಂಡಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ 3 ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಗೆ ಸೋಲುಣಿಸಿ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದೆ. ಎಡಗೈ ಮಧ್ಯಮ ವೇಗಿ ಆಶಿಶ್ ನೆಹ್ರಾ ಹಾಗೂ ಆಸ್ಟ್ರೇಲಿಯಾದ ಮೈಕ್ ಹಸ್ಸಿ,ಎರಡು ಬಾರಿಯ ಚಾಂಪಿಯನ್ನರ ವಿಜಯೋತ್ಸವಕ್ಕೆ ಕಾರಣರಾದರು.

ಜೆಎಸ್ ಸಿಎ ಮೈದಾನದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಗೆಲ್ಲಲು ಆರ್ ಸಿಬಿ ನೀಡಿದ್ದ 140 ರನ್ ಗಳ ಗುರಿ ಪಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ 19.5 ಒವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ ವಿಜಯದ ಗೆರೆ ದಾಟುವಲ್ಲಿ ಸಫಲವಾಯಿತು.

ಆರಂಭಿಕ ಮೈಕ್ ಹಸ್ಸಿ 46 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ಗಳಿದ್ದ 56 ರನ್ ಗಳಿಸಿ ಚೆನ್ನೈಗೆ ಗೆಲುವು ತಂದುಕೊಟ್ಟರು. ಈ ಗೆಲುವಿನೊಂದಿಗೆ ಚೆನ್ನೈ, 3ನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಕನಸಿನೊಂದಿಗೆ ಫೈನಲ್ ಗೆ ಕಾಲಿಟ್ಟಿತು.ಆರ್ ಸಿಬಿ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿ ಚೆನ್ನೈ ದಾಂಡಿಗರನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಮೈಕ್ ಹಸ್ಸಿ ಅರ್ಧಶತಕ ಗಳಿಸಿದ್ದು, ಬೆಂಗಳೂರಿಗೆ ಸೋಲಿನ ದಾರಿ ತೋರಿಸಿತು. ಈ ಪಿಚ್ ಮೇಲೆ ಸುಲಭವಾಗಿ ಬ್ಯಾಟ್ ಮಾಡುವುದು ಕಷ್ಟವಾಗಿದ್ದರಿಂದ ಚೆನ್ನೈ ಸಹ ಪರದಾಡಿತು. ಒಂದು ವೇಳೆ ಆರ್ ಸಿಬಿ 160ರ ಆಸುಪಾಸಿನಲ್ಲಿ ರನ್ ಗಳಿಸಿದ್ದರೆ,ಗೆಲ್ಲುವ ಆವಕಾಶಗಳು ಹೆಚ್ಚಿರುತ್ತಿದ್ದವು.

ಫೈನಲ್ ಪಂದ್ಯ ನಾಳೆ ರಾತ್ರಿ 8 ಗಂಟೆಗೆ ಕೋಲ್ಕತ್ತಾದ ಈಡನ್ ಗಾರ್ಡನ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ  ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!