ಜ್ವಾಲಾ ಗುಟ್ಟಾ 
ಕ್ರೀಡೆ

ಮತ್ತೆ ಜ್ವಾಲಾ ಗುಟ್ಟಾ ಗುಡುಗು

ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಮಾಜಿ ಬ್ಯಾಡ್ಮಿಂಟನ್ ಆಟಗಾರ ಪುಲ್ಲೇಲ ಗೋಪಿಚಂದ್ ವಿರುದ್ಧ ಕಿಡಿಕಾರಿದ್ದಾರೆ...

ಹೈದರಾಬಾದ್: ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಮಾಜಿ ಬ್ಯಾಡ್ಮಿಂಟನ್ ಆಟಗಾರ ಪುಲ್ಲೇಲ ಗೋಪಿಚಂದ್ ವಿರುದ್ಧ ಕಿಡಿಕಾರಿದ್ದಾರೆ.

ಟಾರ್ಗೆಟ್ ಒಲಿಂಪಿಕ್ಸ್ ಪೊಡಿಯಂ (ಟಿಒಪಿ) ಯೋಜನೆಗೆ ಸೇರ್ಪಡೆಗೊಂಡ ಹೊಸ ಆಟಗಾರರ 2ನೇ ಪಟ್ಟಿಯಲ್ಲಿ, ತಮ್ಮ ಹಾಗೂ ಕರ್ನಾಟಕ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ಜೋಡಿಯ ಹೆಸರುಗಳು ಕಾಣಿಸಿಕೊಳ್ಳದಿರುವುದು ಅವರ ಅಸಮಾಧಾನಕ್ಕೆ ಕಾರಣವಾಗಿದೆ.

ಶನಿವಾರ ಈ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಟಿಒಪಿ ಆಯ್ಕೆ ಸಮಿತಿಯಲ್ಲಿರುವ ಪುಲ್ಲೇಲ ಗೋಪಿಚಂದ್ ಅವರು ಉದ್ದೇಶಪೂರ್ವಕವಾಗಿಯೇ ತಮ್ಮನ್ನು ಟಿಒಪಿ ಯೋಜನೆಗೆ ಪರಿಗಣಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ ಎಂದು ದ ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿದೆ.

ಈ ಹಿಂದೆ, ಟಿಒಪಿ ಯೋಜನೆಗೆ ಸೇರ್ಪಡೆಗೊಂಡಿರುವ ಆಟಗಾರರ ಮೊದಲ ಪಟ್ಟಿ ಬಿಡುಗಡೆಗೊಂಡಾಗಲೂ ಅದರಲ್ಲಿ ಜ್ವಾಲಾ ಗುಟ್ಟಾ ಹಾಗೂ ಅಶ್ವಿನಿ ಹೆಸರಿರಲಿಲ್ಲ, ಆಗಲೂ ಅವರು ತಮ್ಮ ಅಳಲು ತೋಡಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!