3ನೇ ದಿನವೂ ವರುಣನದ್ದೇ ಆಟ
ಪ್ರವಾಸಿ ದ.ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಬಹುತೇಕ ರದ್ದಾಗುವ ಸಾಧ್ಯತೆ ದಟ್ಟವಾಗಿದೆ...
ಬೆಂಗಳೂರು: ಪ್ರವಾಸಿ ದ.ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಬಹುತೇಕ ರದ್ದಾಗುವ ಸಾಧ್ಯತೆ ದಟ್ಟವಾಗಿದೆ.
ಮೋಡದ ಮರೆಯಲ್ಲೇ ನಡೆದ ಮೊದಲ ದಿನದಾಟದಲ್ಲಿ ಆತಿಥೇಯ ಭಾರತ ಸಂಪೂರ್ಣ ಪ್ರಾಬಲ್ಯ ಮೆರೆದು, ಸತತ ಎರಡನೇ ಗೆಲುವಿನ ಮೇಲೆ ಕಣ್ಣಿಟ್ಟಿತಾದರೂ ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಭಾರೀ ಪೆಟ್ಟು ನೀಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದೆರಡು ದಿನಗಳಿಂದಲೂ ವರುಣನದ್ದೇ ಆಟವಾಗಿದೆ. ಈ ಮಧ್ಯೆ ಇನ್ನೂ ಎರಡು ಮೂರು ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುಂತಿಳಿಸಿರುವ ಹಿನ್ನೆಲೆಯಲ್ಲಿ, ಪಂದ್ಯದ ನಾಲ್ಕನೇ ದಿನವೂ ಮಳೆ ಸುರಿದರೆ, ಪಂದ್ಯ ಡ್ರಾದೊಂದಿಗೆ ಅಂತ್ಯ ಕಾಣಲಿದೆ.