ನವದೆಹಲಿ: 2013ರ ಐಪಿಲ್ 6ನೇ ಆವೃತ್ತಿಯ ಸ್ಪಾಟ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳಿಗೆ ದೆಹಲಿ ಹೈಕೋರ್ಟ್ ನೋಟೀಸ್ ನೀಡಿದೆ.
ಜುಲೈ 25 ರಂದು ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ಭಾಗಿಯಾಗಿದ್ದವರನ್ನು ನ್ಯಾಯಾಲಯ ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿತ್ತು. ಇದನ್ನು ಪ್ರಶ್ನಿಸಿ ದೆಹಲಿ ಪೊಲೀಸರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಎಸ್. ಶ್ರೀಶಾಂತ್, ಅಜಿತ್ ಚಾಂಡಿಲಾ, ಮತ್ತು ಅಂಕಿತ್ ಚವಾನ್ ಸೇರಿದಂತೆ ಎಲ್ಲರಿಗೂ ದೆಹಲಿ ಹೈಕೋರ್ಟ್ ನೋಟೀಸ್ ನೀಡಿದೆ. ಸುಪ್ರಿಂಕೋರ್ಟ್ ನೇಮಕ ಮಾಡಿದ್ದ ಸಮಿತಿ ವಿಚಾರಣೆ ನಡೆಸಿ ಈ ಮೂವರು ಆಟಗಾರರಿಗೆ ಕ್ಲೀನ್ ಚಿಟ್ ನೀಡಿ, ಚೆನ್ನೈ ಸೂಪರ್ ಕಿಂಗ್ಸ್ ನ ಗುರುನಾಥ್ ಮೇಯಿಪ್ಪನ್ ಹಾಗೂ ರಾಜಸ್ತಾನ ರಾಯಲ್ಸ್ ನ ರಾಜ್ ಕುಂದ್ರಾರಿಗೆ ನಿಷೇಧ ಹೇರಿತ್ತು. ಜೊತೆಗೆ ಸಿಎಸ್ ಕೆ ಮತ್ತು ರಾಜಸ್ತಾನ ರಾಯಲ್ಸ್ ತಂಡಗಳು ಐಪಿಎಲ್ ನಲ್ಲಿ ಭಾಗವಹಿಸದಂತೆ ಅಮಾನತುಗೊಳಿಸಿತ್ತು.