ಬೆಂಗಳೂರು: ಹಾಲಿ ಚಾಂಪಿಯನ್ ಕರ್ನಾಟಕ ಹಾಗೂ 'ಎ' ಗುಂಪಿನಲ್ಲಿ ಅಗ್ರಸ್ಥಾನದಲ್ಲಿರುವ ದೆಹಲಿ ವಿರುದ್ಧದ ರಣಜಿ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ಗಾಯಾಳು ಮನೀಶ್ ಪಾಂಡೆ ತಂಡಕ್ಕೆ ವಾಪಸಾಗಿದ್ದಾರೆ. ಹುಬ್ಬಳ್ಳಿಯ ರಾಜನಗರದ ಕೆಎಸ್‍ಸಿಎ ಮೈದಾನದಲ್ಲಿ ಇದೇ 23ರಿಂದ ಪಂದ್ಯ ಆರಂಭವಾಗಲಿದೆ.
ಪ್ರಕಟಿತ ತಂಡ ಇಂತಿದೆ: ವಿನಯ್ ಕುಮಾರ್ (ನಾಯಕ), ರಾಬಿನ್ ಉತ್ತಪ್ಪ, ಮನೀಶ್ ಪಾಂಡೆ, ಕರುಣ್ ನಾಯರ್, ಸಿ.ಎಂ. ಗೌತಮ್ (ಉಪನಾಯಕ), ಆರ್. ಸಮರ್ಥ್, ಅಭಿಷೇಕ್ ರೆಡ್ಡಿ, ಶ್ರೇಯಸ್ ಗೋಪಾಲ್, ಜೆ. ಸುಚಿತ್, ಉದಿತ್ ಬಿ ಪಟೇಲ್, ಮಯಾಂಕ್ ಅಗರ್ವಾಲ್, ಅಭಿಮನ್ಯು ಮಿಥುನ್, ಎಸ್. ಅರವಿಂದ್, ಎಚ್. ಎಸ್. ಶರತ್, ಡೇವಿಡ್ ಮಥಿಯಾಸ್