ದುಬೈ: ಮಧ್ಯಮ ಕ್ರಮಾಂಕದ ಜೋಸ್ ಬಟ್ಲರ್ (ಅಜೇಯ 116: 52 ಎಸೆತ, 10 ಬೌಂಡರಿ, 8 ಸಿಕ್ಸರ್) ದಾಖಲೆಯ ಶತಕದ ನೆರವಿನೊಂದಿಗೆ ಇಂಗ್ಲೆಂಡ್, ಶುಕ್ರವಾರ ನಡೆದ ಪಾಕಿಸ್ತಾನ ವಿರುದ್ಧ 4ನೇ ಏಕದಿನ ಪಂದ್ಯದಲ್ಲಿ 84 ರನ್ ಜಯ ಸಾಧಿಸಿ ಆ ಮೂಲಕ, 4 ಪಂದ್ಯಗಳ ಸರಣಿಯನ್ನು 3-1 ಅಂತರದಿಂದ ಜಯಿಸಿತು.ಗೆಲ್ಲಲು 356 ರನ್ ಗುರಿ ಪಡೆದಿದ್ದ ಪಾಕಿಸ್ತಾನ, 40.4 ಓವರ್‍ಗಳಲ್ಲಿ 271 ರನ್ ಮೊತ್ತಕ್ಕೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಕೇವಲ 46 ಎಸೆತಗಳಲ್ಲಿ 8 ಬೌಂಡರಿ, 8 ಸಿಕ್ಸರ್ ಸಿಡಿಸುವ ಮೂಲಕ ಇಂಗ್ಲೆಂಡ್ ಪರ ಶರವೇಗದಲ್ಲಿ ಶತಕ ಬಾರಿಸಿದ ಇಂಗ್ಲೆಂಡ್‍ನ ಮೊದಲ ಬ್ಯಾಟ್ಸಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.