ನಾಗ್ಪುರ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20, ಏಕದಿನ ಸರಣಿಗಳನ್ನು ಸೋತ್ತಿದ್ದ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿದೆ.
ನಾಗ್ಪುರದ ವಿದರ್ಭ ಕ್ರೀಡಾಂಗಣದಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ 124 ರನ್ ಗಳಿಂದ ಭರ್ಜರಿ ಜಯ ಗಳಿಸಿದೆ. ಇದರೊಂದಿಗೆ ನಾಲ್ಕು ಟೆಸ್ಟ್ ಪಂದ್ಯಗಳ ಪೈಕಿ 2-0 ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಮೊದಲ ಹಾಗೂ ಮೂರನೇ ಪಂದ್ಯಗಳಲ್ಲಿ ಭಾರತ ಜಯ ಗಳಿಸಿದ್ದು, ಬೆಂಗಳೂರಿನಲ್ಲಿ ನಡೆದ ಎರಡನೇ ಪಂದ್ಯ ಮಳೆಯಿಂದ ಡ್ರಾನಲ್ಲಿ ಅಂತ್ಯವಾಗಿತ್ತು.
3ನೇ ಟೆಸ್ಟ್ ನಲ್ಲಿ ಭಾರತ ಮೊದಲ ಬ್ಯಾಟ್ ಮಾಡಿದ 215 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ಕೇವಲ 79 ರನ್ ಗಳಿಗೆ ಆಲೌಟ್ ಆಗಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 173 ರನ್ ಗಳಿಗೆ ಆಲೌಟ್ ಆಗಿ ಆಫ್ರಿಕಾಗೆ 309 ರನ್ ಗಳ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ ಆಫ್ರಿಕಾ ಆಟಗಾರರು 185 ರನ್ ಗಳಿಗೆ ಆಲೌಟ್ ಆಗಿದ್ದು, ಟೀಂ ಇಂಡಿಯಾ 124 ರನ್ ಗಳಿ ಜಯಗಳಿಸಿದೆ.
ಸರಣಿಯ ಕೊನೆಯ ಪಂದ್ಯ ನವದೆಹಲಿಯಲ್ಲಿ ಡಿಸೆಂಬರ್ 3 ರಿಂದ 7 ರವರೆಗೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics