ಆರ್ ಅಶ್ವಿನ್ 
ಕ್ರೀಡೆ

ಎರಡನೇ ಸ್ಥಾನಕ್ಕೆ ಅಶ್ವಿನ್

ಪ್ರಸಕ್ತ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನದೊಂದಿಗೆ ಟೀಂ ಇಂಡಿಯಾದ ಅಗ್ರ ಬೌಲರ್ ಆಗಿ ಹೊರಹೊಮ್ಮಿರುವ...

ದುಬೈ: ಪ್ರಸಕ್ತ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನದೊಂದಿಗೆ ಟೀಂ ಇಂಡಿಯಾದ ಅಗ್ರ ಬೌಲರ್ ಆಗಿ ಹೊರಹೊಮ್ಮಿರುವ ರವಿಚಂದ್ರನ್ ಅಶ್ವಿನ್, ನೂತನ ಐಸಿಸಿ ಟೆಸ್ಟ್ ಬೌಲರ್‍ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

ಇದು ಅವರ ಈವರೆಗಿನ ವೃತ್ತಿಜೀವನದ ಶ್ರೇಷ್ಠ ಸಾಧನೆಯಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ನಾಗ್ಪುರ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್, ಎರಡೂ ಇನಿಂಗ್ಸ್‍ಗಳಿಂದ 12 ವಿಕೆಟ್ ಪಡೆಯುವ ಮೂಲಕ, ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಗಳಿಸಿದ್ದ 124 ರನ್‍ಗಳ ದೊಡ್ಡ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಕಳೆದ ವಾರ ಬಿಡುಗಡೆಗೊಂಡಿದ್ದ ರ್ಯಾಂಕಿಂಗ್ ಪಟ್ಟಿಯಲ್ಲಿ ಅಶ್ವಿನ್ ಐದನೇ ಸ್ಥಾನ ಗಳಿಸಿದ್ದು, ಅದು ಆವರೆಗಿನ ಅವರ ಶ್ರೇಷ್ಠ ಸಾಧನೆಯಾಗಿತ್ತು. ನೂತನ ಪಟ್ಟಿಯಲ್ಲಿ ಅವರು, ಒಟ್ಟು 856 ಅಂಕಗಳ ಮೂಲಕ 2ನೇ ಸ್ಥಾನ ಅಲಂಕರಿಸಿದ್ದಾರೆ. ಈ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಡೇಲ್ ಸ್ಟೇಯ್ನ್, ಒಟ್ಟು 884 ಅಂಕಗಳ ಮೂಲಕ ಮೊದಲ ಸ್ಥಾನದಲ್ಲಿದ್ದರೆ, 846 ಅಂಕಗಳನ್ನು ಪಡೆಯುವ ಮೂಲಕ ಇಂಗ್ಲೆಂಡ್‍ನ ಜೇಮ್ಸ್ ಆಂಡರ್ಸನ್, ಮೂರನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ