3ನೇ ಗೋಲಿನ ಸಂಭ್ರಮದಲ್ಲಿ ಕೇರಳ ಬ್ಲಾಸ್ಟರ್ಸ್ ಆಟಗಾರರು 
ಕ್ರೀಡೆ

ಯುನೈಟೆಡ್ ಎಫ್‌ಸಿ ವಿರುದ್ಧ ಬ್ಲಾಸ್ಟರ್ಸ್‌ಗೆ ಭರ್ಜರಿ ಜಯ

ಪಂದ್ಯದ ಆರಂಭದಲ್ಲಿ ಮಂದಗತಿಯ ಆಟ ಪ್ರದರ್ಶಿಸಿದರೂ ಎರಡನೇ ಅವಧಿಯಲ್ಲಿ ಆಕ್ರಮಣಕಾರಿ ಆಟದ ಮೂಲಕ ಎದುರಾಳಿ ತಂಡದ ಮೇಲೆ ಸವಾರಿ ಮಾಡಿದ ಕೇರಳ...

ಕೊಚ್ಚಿ: ಪಂದ್ಯದ ಆರಂಭದಲ್ಲಿ ಮಂದಗತಿಯ ಆಟ ಪ್ರದರ್ಶಿಸಿದರೂ ಎರಡನೇ ಅವಧಿಯಲ್ಲಿ ಆಕ್ರಮಣಕಾರಿ ಆಟದ ಮೂಲಕ ಎದುರಾಳಿ ತಂಡದ ಮೇಲೆ ಸವಾರಿ ಮಾಡಿದ ಕೇರಳ ಬ್ಲಾಸ್ಟರ್ಸ್ ತಂಡ ಇಂಡಿಯನ್ ಸೂಪರ್ ಲೀಗ್ ಟೂರ್ನಿಯಲ್ಲಿ ಗೆಲುವಿನ ಆರಂಭ ಮಾಡಿದೆ.

ಮಂಗಳವಾರ ಜವಾಹರ್‌ಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಕೇರಳ ಬ್ಲಾಸ್ಟರ್ಸ್ ತಂಡ 3-1 ಗೋಲುಗಳ ಅಂತರದಲ್ಲಿ ನಾರ್ಥ್‌ಈಸ್ಟ್ ಯುನೈಟೆಡ್ ಎಫ್‌ಸಿ ವಿರುದ್ಧ ಜಯ ಸಂಪಾದಿಸಿತು. ಆ ಮೂಲಕ ಯುನೈಟೆಡ್ ವಿರುದ್ಧ ಮೊದಲ ಬಾರಿಗೆ ಗೆದ್ದ ಸಾಧನೆ ಮಾಡಿದೆ.

ಕೇರಳ ಬ್ಲಾಸ್ಟರ್ಸ್ ತಂಡ ಪರ ಜೋಶು ಕುರಿಯಾಸ್(49ನೇ), ಮೊಹಮದ್ ರಾಫಿ(68ನೇ) ಮತ್ತು ಸ್ಯಾಂಚೆಸ್ ವ್ಯಾಟ್(72ನೇ) ನಿಮಿಷದಲ್ಲಿ ಗೋಲು ದಾಖಲಿಸಿದರು. ಇನ್ನು ನಾರ್ಥ್ ಈಸ್ಟ್ ಯುನೈಟೆಡ್ ತಂಡದ ಪರ ನಿಕೊಲಸ್ ವೆಲೆಜ್(82ನೇ) ಗೋಲು ದಾಖಲಿಸಿದರು.

ಕಳೆದ ಬಾರಿಯೂ ಆವೃತ್ತಿಯಲ್ಲಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟಿದ್ದರೂ ಕೇರಳ ಬ್ಲಾಸ್ಟರ್ಸ್ ತಂಡ ಯುನೈಟೆಡ್ ತಂಡದ ವಿರುದ್ಧ ಆಡಿದ್ದ ಎರಡೂ ಪಂದ್ಯಗಳಲ್ಲೂ ಗೆಲುವು ದಾಖಲಿ ಸಾಧ್ಯವಾಗಿರಲಿಲ್ಲ. ಅಲ್ಲದೆ ಮೊದಲ ಆವೃತ್ತಿಯಲ್ಲಿ ಯಾವುದೇ ಗೋಲು ಸಹ ಗಳಿಸಲು ಸಾಧ್ಯವಾಗಿರಲಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ