ರಾಫೆಲ್ ನಡಾಲ್ 
ಕ್ರೀಡೆ

ಚೀನಾ ಓಪನ್ ಟೆನಿಸ್ ಪಂದ್ಯಾವಳಿ: ನಡಾಲ್, ಜೊಕೊಗೆ ಮುನ್ನಡೆ

ಪ್ರಸಕ್ತ ಸಾಲಿನಲ್ಲಿ ಸಾಕಷ್ಟು ನಿರಾಸೆ ಅನುಭವಿಸಿರುವ ರಾಫೆಲ್ ನಡಾಲ್ ಅವರು ಚೀನಾ ಓಪನ್ ಟೆನಿಸ್ ಟೂರ್ನಿಯ ಎರಡನೇ ಸುತ್ತಿಗೆ...

ಬೀಜಿಂಗ್: ಪ್ರಸಕ್ತ ಸಾಲಿನಲ್ಲಿ ಸಾಕಷ್ಟು ನಿರಾಸೆ ಅನುಭವಿಸಿರುವ ರಾಫೆಲ್ ನಡಾಲ್ ಅವರು ಚೀನಾ ಓಪನ್ ಟೆನಿಸ್ ಟೂರ್ನಿಯ ಎರಡನೇ ಸುತ್ತಿಗೆ ಲಗ್ಗೆ ಹಾಕಿದ್ದಾರೆ.

ಮಂಗಳವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ 14ನ ಗ್ರಾಂಡ್‌ಸ್ಲಾಮ್ ಪ್ರಶಸ್ತಿ ವಿಜೇತ ನಡಾಲ್, ತಮ್ಮ ಪ್ರತಿಸ್ಪರ್ಧಿ ಸ್ಥಳೀಯ ಆಟಗಾರ ಡಿ ವು ವಿರುದ್ಧ ಗೆಲುವು ಸಾಧಿಸಿದರು.

1 ಗಂಟೆ 26 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ನಡಾಲ್ 6-4, 6-4 ಸೆಟ್‌ಗಳ ಮೂಲಕ ಜಯಿಸಿದರು. ಗ್ರಾಂಡ್ ಸ್ಲಾಮ್ ಟೂರ್ನಿಗಳಲ್ಲಿನ ನಿರಾಸೆಯನ್ನು ಮುಂದಿನ ತಿಂಗಳು ನಡೆಯಲಿರುವ ಎಟಿಪಿ ವಿಶ್ವ ಟೂರ್ ಫೈನಲ್ಸ್‌ನಲ್ಲಿ ಮೆರೆಯಲು ನಡಾಲ್ ಸಜ್ಜಾಗುತ್ತಿದ್ದಾರೆ.

ಜೊಕೊಗೆ ಜಯ: ವಿಶ್ವದ ನಂಬರ್ ಒನ್ ಆಟಗಾರ ನೊವಾಕ್ ಜೊಕೊವಿಚ್, ಚೀನಾ ಓಪನ್ ದ್ವಿತೀಯ ಸುತ್ತು ತಲುಪಿದ್ದಾರೆ. ಇಟಲಿಯ ಸಿಮೊನ್ ಬೊಲೆಲ್ಲಿ ವಿರುದ್ಧ ಸೆಣಸಿದ ಅವರು, 6-1,6-1 ಸೆಟ್‌ಗಳ ಅಂತರದಲ್ಲಿ ಜಯ ಸಾಧಿಸಿದರು. ಈ ಗೆಲುವಿನ ಮೂಲಕ ಸತತ 25 ಪಂದ್ಯಗಳಲ್ಲಿ ಜಯ ಕಂಡ ಸಾಧನೆ ಮಾಡಿದ್ದಾರೆ ವಿಶ್ವದ ನಂಬರ್ ಒನ್ ಆಟಗಾರ ಜೊಕೊವಿಚ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!