ಅನುರಾಗ್ ಠಾಕೂರ್ 
ಕ್ರೀಡೆ

ಪಿಸಿಬಿಯೊಂದಿಗಿನ ಮಾತುಕತೆಯನ್ನು ರದ್ದುಪಡಿಸಿದ ಬಿಸಿಸಿಐ

ಭಾರತ-ಪಾಕ್ ಕ್ರಿಕೆಟ್ ಸರಣಿಗೆ ಮರುಜೀವ ನೀಡುವ ಸಲುವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಯೊಂದಿಗಿನ ಬಿಸಿಸಿಐ ಮಾತುಕತೆಗೆ ಶಿವಸೇನೆ ತೀವ್ರ ವಿರೋಧ...

ನವದೆಹಲಿ: ಭಾರತ-ಪಾಕ್ ಕ್ರಿಕೆಟ್ ಸರಣಿಗೆ ಮರುಜೀವ ನೀಡುವ ಸಲುವಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ)ಯೊಂದಿಗಿನ ಬಿಸಿಸಿಐ ಮಾತುಕತೆಗೆ ಶಿವಸೇನೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಪಿಸಿಬಿಯೊಂದಿಗಿನ ಮಾತುಕತೆಯನ್ನು ರದ್ದುಪಡಿಸಲಾಗಿದೆ ಎಂದು ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಅನುರಾಗ್ ಠಾಕೂರ್ ಸ್ಪಷ್ಟಪಡಿಸಿದ್ದಾರೆ. 
ಮುಂಬೈನಲ್ಲಿ ಇಂದು ನಡೆಯಬೇಕಿದ್ದ ಮಾತುಕತೆಗೆ ಶಿವಸೇನೆ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಸಭೆಯನ್ನು ರದ್ದುಗೊಳಿಸಿದ್ದ ಬಿಸಿಸಿಐ ನಾಳೆ ನವದೆಹಲಿಯಲ್ಲಿ ಸಭೆ ನಡೆಸುವ ವಂದತಿಗಳಿವೆ. ಆದರೆ ನಾಳೆ ದೆಹಲಿಯಲ್ಲಿ ಸಭೆ ನಡೆಸುವ ಯಾವುದೇ ನಿಗದಿತ ವೇಳಾಪಟ್ಟಿ ಇಲ್ಲ. ಪಿಸಿಬಿ ಜತೆ ಮಾತುಕತೆ ನಡೆಯುವುದಾದರೆ ಅದು ಮುಂಬೈನ ಬಿಸಿಸಿಐನ ಪ್ರಧಾನ ಕಚೇರಿಯಲ್ಲೇ ನಡೆಯಲಿದೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.
ಇದೇ ವೇಳೆ ಶಿವಸೇನೆ ಕೃತ್ಯವನ್ನು ಖಂಡಿಸಿರುವ ಅನೂರಾಗ್ ಠಾಕೂರ್, ಮಹತ್ವದ ಸಭೆಗಳು ನಡೆಸುವ ಸಂದರ್ಭಗಳಲ್ಲಿ ವಿನಾಃ ಕಾರಣ ದಾಂದಲೆ ನಡೆಸಿ, ಸಭೆಗಳನ್ನು ರದ್ದುಪಡಿಸುವಂತೆ ಆದೇಶಿಸುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದ್ದು, ಪ್ರತಿಭಟನೆಗಳನ್ನು ನಡೆಸಬೇಕೆಂದರೇ ರಸ್ತೆಗಳಲ್ಲಿ ನಡೆಸಬೇಕೆ ಹೊರತು ಮನೆ, ಕೇಂದ್ರ ಕಚೇರಿಗಳಿಗೆ ನುಗ್ಗಿ ದಾಂದಲೆ ನಡೆಸಬಾರದು ಎಂದು ಹೇಳಿದ್ದಾರೆ. 
ಪಿಸಿಬಿ-ಬಿಸಿಸಿಐ ನಡುವಿನ ಮಾತುಕತೆಗೆ ಶಿವಸೇನೆ ಅಡ್ಡಿ ಪಡಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬೇಕಾದರೆ ಕೊಲ್ಕತ್ತಾದಲ್ಲಿ ಸಭೆ ನಡೆಸುವಂತೆ ಆಹ್ವಾನ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!