30ರಂದು ವಿಜೇಂದರ್ ಗೆ ಎರಡನೇ ಸವಾಲು
ಇತ್ತೀಚೆಗಷ್ಟೇ ನಡೆದ ತಮ್ಮ ಮೊದಲ ವೃತ್ತಿಪರ ಬಾಕ್ಸಿಂಗ್ ಪಂದ್ಯದಲ್ಲಿ ಬ್ರಿಟನ್ನ ಸೋನಿ ವೈಟಿಂಗ್ ಅವರನ್ನು ಸೋಲಿಸಿದ್ದ ಭಾರತದ...
ಲಂಡನ್: ಇತ್ತೀಚೆಗಷ್ಟೇ ನಡೆದ ತಮ್ಮ ಮೊದಲ ವೃತ್ತಿಪರ ಬಾಕ್ಸಿಂಗ್ ಪಂದ್ಯದಲ್ಲಿ ಬ್ರಿಟನ್ನ ಸೋನಿ ವೈಟಿಂಗ್ ಅವರನ್ನು ಸೋಲಿಸಿದ್ದ ಭಾರತದ ಹೆಸರಾಂತ ಬಾಕ್ಸರ್ ವಿಜೇಂದರ್ ಸಿಂಗ್, ಅ. 30ರಂದು ನಡೆಯಲಿರುವ ತಮ್ಮ 2ನೇ ಬಾಕ್ಸಿಂಗ್ ಸೆಣಸಾಟದಲ್ಲಿ ಇಂಗ್ಲೆಂಡ್ನ ಮತ್ತೋರ್ವ ಬಾಕ್ಸರ್ ಡೀನ್ ಗಿಲ್ಲೆನ್ ವಿರುದ್ಧ ಸೆಣಸಲಿದ್ದಾರೆಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಗಿಲ್ಲೆನ್ ಇದೇ ವರ್ಷ ಮೇ ತಿಂಗಳಿನಲ್ಲಿ ಪೊ್ರ ಬಾಕ್ಸಿಂಗ್ಗೆ ಕಾಲಿಟ್ಟಿದ್ದಾರೆ. ಈ ಇಬ್ಬರೂ ತಮ್ಮ ದೇಶಗಳಲ್ಲಿ ಸರ್ಕಾರಿ ಅಧಿಕಾರಿಗಳಾಗಿರುವುದು ವಿಶೇಷ. ವಿಜೇಂದರ್ ಸಿಂಗ್ ಹರ್ಯಾಣ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಉಪ ವರಿಷ್ಠಾಧಿ- ಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಇಂಗ್ಲೆಂಡ್ನಲ್ಲಿ ಗಿಲ್ಲೆನ್ ಅವರು ಅಗ್ನಿಶಾಮಕ ದಳ ಇಲಾಖೆಯಲ್ಲಿ ಸೇವೆಯಲ್ಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.