ಚೆನ್ನೈ: ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಬಿಸಿಸಿಐ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಮ್ಯಾಚ್ ಫಿಕ್ಸಿಂಗ್ ಆರೋಪದಡಿ ಮುಂದಿನ ಐಪಿಎಲ್ ಪಂದ್ಯಗಳಿಗೆ ಸಿಎಸ್ ಕೆ ಹಾಗೂ ಆರ್ಆರ್ ತಂಡಗಳು ಅನರ್ಹವಾದ ಬೆನ್ನಲ್ಲೇ ಧೋನಿ ಶ್ರೀನಿವಾಸನ್ ಅವರನ್ನು ಅವರ ನಿವಾಸದಲ್ಲೇ ಭೇಟಿ ಮಾಡಿರುವುದು ಹಲವು ಟೀಕೆಗಳಿಗೆ ಗುರಿಯಾಗಿದೆ.
ಚೆನ್ನೈನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧದ ಏಕದಿನ ಪಂದ್ಯ ನಡೆದ ಮಾರನೇ ದಿನವೇ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ. ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.