ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಪಂದ್ಯದಲ್ಲಿ ಗೆದ್ದು ಬೀಗಿದ ಭಾರತ ತಂಡ(ಚಿತ್ರಕೃಪೆ: ಕ್ರಿಕ್ ಇನ್ಫೋ) 
ಕ್ರೀಡೆ

ಚೆನ್ನೈನಲ್ಲಿ ಗೆದ್ದು ಸರಣಿ ಸಮಬಲ ಸಾಧಿಸಿದ ಭಾರತ

ಸರಣಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಡು ಇಲ್ಲವೆ ಮಡಿಯಂತಾಗಿದ್ದ ಪಂದ್ಯದಲ್ಲಿ ಟೀಂ ಇಂಡಿಯಾ 35 ರನ್ ಗಳ ಅಂತರದಲ್ಲಿ ಜಯ ಸಾಧಿಸಿ, ಸರಣಿಯನ್ನು 2-2 ರಿಂದ ಸಮಬಲ ಮಾಡಿಕೊಂಡಿತು...

ಚೆನ್ನೈ: ಸರಣಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಾಡು ಇಲ್ಲವೆ ಮಡಿಯಂತಾಗಿದ್ದ ಪಂದ್ಯದಲ್ಲಿ ಟೀಂ ಇಂಡಿಯಾ 35 ರನ್ ಗಳ ಅಂತರದಲ್ಲಿ ಜಯ ಸಾಧಿಸಿ, ಸರಣಿಯನ್ನು 2-2 ರಿಂದ ಸಮಬಲ  ಮಾಡಿಕೊಂಡಿತು.

ಚೆನ್ನೈನ ಎಂ.ಎ. ಚಿದಂಬರಂ ಮೈದಾನದಲ್ಲಿ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ಸಂಘಟನಾತ್ಮಕ ಆಟ ಪ್ರದರ್ಶಿಸಿದ ಟೀ ಇಂಡಿಯಾ ಅರ್ಹವಾಗಿಯೇ 35  ರನ್ ಗಳ ಜಯಸಾಧಿಸಿತು. ಪ್ರಮುಖವಾಗಿ ಮಧ್ಯಮ ಕ್ರಮಾಂಕದ ಆಟಗಾರ ವಿರಾಟ್ ಕೊಹ್ಲಿ (138ರನ್ ) ಸಿಡಿಸಿದ ಆಕರ್ಷಕ ಶತಕ ಮತ್ತು ನಾಯಕ ಮಹೇಂದ್ರ ಸಿಂಗ್ ಧೋನಿ ಅವರ  ಸಮಯೋಚಿತ ಆಟ ದಕ್ಷಿಣ ಆಫ್ರಿಕಾ ತಂಡಕ್ಕೆ ಸವಾಲಿನ ಮೊತ್ತವನ್ನು ಗುರಿಯಾಗಿ ನೀಡಲು ನೆರವಾಯಿತು.

ಟಾಸ್ ಗೆದ್ದ ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮೊದಲು ಬ್ಯಾಂಟಿಗ್ ಆಯ್ಕೆ ಮಾಡಿಕೊಂಡರಾದರೂ, ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. ತಂಡದ ಮೊತ್ತ ಕೇವಲ 28  ರನ್ ಗಳಿರುವಾಗಲೇ ಆರಂಭಿಕ ಆಟಗಾರ ರೋಹಿತ್ ಶರ್ಮಾ ಮೊರಿಸ್ ಗೆ ವಿಕೆಟ್ ಒಪ್ಪಿಸಿದರು. ಬಳಿಕ ಧವನ್ ಕೂಡ ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲದೆ ರಬಡಾಗೆ ವಿಕೆಟ್ ಒಪ್ಪಿಸಿದರು. ನಂತರ  ಜೊತೆ ಗೂಡಿದ ಕೊಹ್ಲಿ ಮತ್ತು ಅಜಿಂಕ್ಯಾ ರಹಾನೆ ಭಾರತ ತಂಡವನ್ನು ಆರಂಭಿಕ ಆಘಾತದಿಂದ ಮೇಲೆತ್ತಿದರು. ಶತಕದ ಜೊತೆಯಾಟ ಆಡಿದಿ ಈ ಜೋಡಿಯನ್ನು ಡೇಲ್ ಸ್ಟೇಯ್ನ್  ಬೇರ್ಪಡಿಸಿದರು. 45 ರನ್ ಗಳಿಸಿ ಅರ್ಧಶತಕದ ಹೊಸ್ತಿಲಲ್ಲಿದ್ದ ರಹಾನೆ ಅವರನ್ನು ಸ್ಟೇಯ್ನ್ 27ನೇ ಓವರ್ ನಲ್ಲಿ ಪೆವಿಲಿಯನ್ ಗೆ ಅಟ್ಟಿದರು.

ಬಳಿಕ ಕೊಹ್ಲಿ ಜೊತೆಗೂಡಿದ ಸುರೇಶ್ ರೈನಾ ಉತ್ತಮ ಆರಂಭ ಪಡೆದರು. ನೋಡ ನೋಡುತ್ತಿದ್ದಂತೆಯೇ ಕೊಹ್ಲಿ ಕೂಡ ಅರ್ಧಶತಕ ಸಿಡಿಸಿದ್ದರು. ಅಲ್ಲದೆ ಈ ಜೋಡಿ ಉತ್ತಮವಾಗಿ ಆಡುವ  ಮೂಲಕ ಶತಕದ ಜೊತೆಯಾಟ ಆಡಿದರು. ಈ ನಡುವೆ ರೈನಾ ಕೂಡ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಕೊಹ್ಲಿ ಕೂಡ ಇದೇ ವೇಳೆ ಆಕರ್ಷಕ ಶತಕ ಸಿಡಿಸಿ ಸಂಭ್ರಮಿಸಿದರು. ತಂಡದ ಮೊತ್ತ  266 ರನ್ ಗಳಾಗಿದ್ದಾಗ ರೈನಾ ಡೇಲ್ ಸ್ಟೇಯ್ನ್ ಗೆ ವಿಕೆಟ್ ಒಪ್ಪಿಸಿದರು. ಬಳಿಕ ಕೊಹ್ಲಿ ಜೊತೆಗೂಡಿದ ನಾಯಕ ಧೋನಿ ಮತ್ತು ಕೊಹ್ಲಿ ದಕ್ಷಿಣ ಆಫ್ರಿಕಾಕ್ಕೆ ಸವಾಲಿನ ಗುರಿ ನೀಡುವ ಹೊಣೆ  ಹೊತ್ತರು. ಅಂತಿಮವಾಗಿ ಭಾರತ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 299 ರನ್ ಗಳ ಸವಾಲಿನ ಮೊತ್ತ ಪೇರಿಸಿತು.

ಉತ್ತಮ ಆರಂಭದ ಹೊರತಾಗಿಯೂ ಮುಗ್ಗರಿಸಿದ ಆಫ್ರಿಕಾ
ಉತ್ತಮ ಲಯದಲ್ಲಿರುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಡಿ ಕಾಕ್ ಅವರು 35 ಎಸೆತಗಳಲ್ಲಿ 43 ರನ್ ಗಳಿಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ಉತ್ತಮ ಆರಂಭ ಒದಗಿಸಿದರಾದರೂ, ತಂಡದ ಇತರೆ  ಆಟಗಾರರಾದ ಹಶೀಂ ಆಮ್ಲಾ (7 ರನ್) ಹಾಗೂ ಡುಪ್ಲೆಸಿಸ್ (17 ರನ್) ಅವರ ವಿಕಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಾಯಕ ಎಬಿ ಡಿ ವಿಲಿಯರ್ಸ್ 107 ಎಸೆತಗಳಲ್ಲಿ 112 ರನ್ ಗಳಿಸಿ  ಭಾರತವನ್ನು ಕಾಡಿದರು. ಅದರೆ, ಹರ್ಭಜನ್ ಸಿಂಗ್ ಆರಂಭದಲ್ಲಿ ರನ್ ಗಳಿಕೆಗೆ ಕಡಿವಾಣ ಹಾಕಿ 2 ವಿಕೆಟ್ ಪಡೆದರೆ, ಭುವನೇಶ್ವರ್ ಕುಮಾರ್ 3 ವಿಕೆಟ್ ಉರುಳಿಸಿದರು. ಅಕ್ಷರ್, ಮಿಶ್ರಾ ಹಾಗೂ  ಮೋಹಿತ್ ತಲಾ ಒಂದು ವಿಕೆಟ್ ಪಡೆದರು.

ಆ ಮೂಲಕ ನಾಲ್ಕನೇ ಪಂದ್ಯವನ್ನು 35 ರನ್ ಗಳಿಂದ ಭಾರತ ಸರಣಿಯನ್ನು 2-2 ಮಾಡಿಕೊಂಡಿದೆ. ಐದನೇ ಹಾಗೂ ಅಂತಿಮ ಪಂದ್ಯ ಮುಂಬೈನಲ್ಲಿ ಅಕ್ಟೋಬರ್ 25 ರಂದು ನಡೆಯಲಿದೆ. ಐದು  ಏಕದಿನ ಪಂದ್ಯಗಳ ಕ್ರಿಕೆಟ್ ಸರಣಿಯಲ್ಲಿ ಪ್ರಸ್ತುತ ಭಾರತ ಮತ್ತು ದಕ್ಷಿಣ ಆಫ್ರಿಕಾ 2-2ರಲ್ಲಿ ಸಮಬಲ ಸಾಧಿಸಿದ್ದು, ಐದನೇ ಹಾಗೂ ಅಂತಿಮ ಏಕದಿನ ಪಂದ್ಯ ಅಕ್ಟೋಬರ್ 25ರಂದು  ಮುಂಬೈನಲ್ಲಿ ನಡೆಯಲಿದೆ. ಉಭಯ ತಂಡಗಳು ನವೆಂಬರ್ ತಿಂಗಳಲ್ಲಿ ನಾಲ್ಕು ಟೆಸ್ಟ್ ಪಂದ್ಯಗಳನ್ನಾಡಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT