ಸಾನಿಯಾ-ಹಿಂಗಿಸ್ ಜೋಡಿಗೆ ಡಬ್ಲ್ಯುಟಿಎ ಪ್ರಶಸ್ತಿ
ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಸ್ವಿಜರ್ಲೆಂಡ್ನ ಮಾರ್ಟಿನಾ ಹಿಂಗಿಸ್ ಜೋಡಿ ಸಿಂಗಾಪುರದಲ್ಲಿ ನಡೆಯುತ್ತಿರುವ ಡಬ್ಲ್ಯುಟಿಎ ಫೈನಲ್ಸ್ ನಲ್ಲಿ ಪ್ರಶಸ್ತಿ ವಿಜೇತರಾಗಿದ್ದಾರೆ...
ಸಿಂಗಾಪುರ: ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಸ್ವಿಜರ್ಲೆಂಡ್ನ ಮಾರ್ಟಿನಾ ಹಿಂಗಿಸ್ ಜೋಡಿ ಸಿಂಗಾಪುರದಲ್ಲಿ ನಡೆಯುತ್ತಿರುವ ಡಬ್ಲ್ಯುಟಿಎ ಫೈನಲ್ಸ್ ನಲ್ಲಿ ಪ್ರಶಸ್ತಿ ವಿಜೇತರಾಗಿದ್ದಾರೆ.
ಸಾನಿಯಾ ಮತ್ತು ಹಿಂಗಿಸ್ ಜೋಡಿ ಫೈನಲ್ನಲ್ಲಿ ಸ್ಪಾನಿಷ್ ಆಟಗಾರ್ತಿಯರಾದ ಮಗುರುಜಾ ಗಾರ್ಬಿ ಮತ್ತು ಸುಯೆರೇಜ್ ನಾವಾ ಕಾರ್ಲಾ ಜೋಡಿಯನ್ನು 6-0, 6-3ರಿಂದ ಮಣಿಸುವ ಮೂಲಕ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ. ಆ ಮೂಲಕ ಟೆನ್ನಿಸ್ ಲೋಕದಲ್ಲಿ ಸಾನ್ಟಿನಾ ಎಂದೇ ಖ್ಯಾತರಾಗಿರುವ ಭಾರತ-ಸ್ವಿಸ್ ಜೋಡಿ ವರ್ಷದ 9ನೇ ಪ್ರಶಸ್ತಿ ಗಳಿಸಿಕೊಂಡಂತಾಗಿದೆ. ಸಾನಿಯಾ ಪಾಲಿಗೆ ಇದು ವರ್ಷದ 10ನೇ ಪ್ರಶಸ್ತಿಯಾಗಿದೆ.
ಈ ಪ್ರಶಸ್ತಿ ಗೆಲುವಿನೊಂದಿಗೆ ಸಾನ್ಟಿನಾ ಜೋಡಿ ತಾವು ನಂಬರ್ ಒನ್ ಜೋಡಿ ಎಂದು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.