ಟಿ20ಯಲ್ಲಿ ಕೊಹ್ಲಿ ನಂಬರ್ ಒನ್
ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕಣಕ್ಕಿಳಿಯದ ಆಸ್ಟ್ರೇಲಿಯಾದ ಏರಾನ್ ಫಿಂಚ್ ಐಸಿಸಿ ಟಿ20 ರ್ಯಾಂಕಿಂಗ್ನಲ್ಲಿ 17 ಅಂಕಗಳನ್ನು ಕಳೆದುಕೊಳ್ಳುವ ಮೂಲಕ ತಮ್ಮ ಅಗ್ರಸ್ಥಾನವನ್ನು ಕಳೆದುಕೊಂಡಿದ್ದಾರೆ...
ದುಬೈ: ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕಣಕ್ಕಿಳಿಯದ ಆಸ್ಟ್ರೇಲಿಯಾದ ಏರಾನ್ ಫಿಂಚ್ ಐಸಿಸಿ ಟಿ20 ರ್ಯಾಂಕಿಂಗ್ನಲ್ಲಿ 17 ಅಂಕಗಳನ್ನು ಕಳೆದುಕೊಳ್ಳುವ ಮೂಲಕ ತಮ್ಮ ಅಗ್ರಸ್ಥಾನವನ್ನು ಕಳೆದುಕೊಂಡಿದ್ದಾರೆ.
ಈ ಮೂಲಕ ಟೀಂ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಮುನ್ನಡೆ ಪಡೆದು ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ಮಂಗಳವಾರ ಬಿಡುಗಡೆಯಾದ ನೂತನ ಐಸಿಸಿ ಟಿ20 ರ್ಯಾಂಕಿಂಗ್ ನಲ್ಲಿ ವಿರಾಟ್ ಕೊಹ್ಲಿ 861 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಏರಾನ್ ಫಿಂಚ್ 854 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನು ಇಂಗ್ಲೆಂಡ್ನ ಅಲೆಕ್ಸ್ ಹೇಲ್ಸ್ 841 ಅಂಕಗಳೊಂದಿಗೆ ತೃತೀಯ ಸ್ಥಾನದಲ್ಲಿದ್ದರೆ, ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಸುರೇಶ್ ರೈನಾ 11ನೇ ಸ್ಥಾನದಲ್ಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.