ಟೆಸ್ಟ್ ರ್ಯಾಂಕಿಂಗ್: ಅಶ್ವಿನ್ ಪ್ರಗತಿ
ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪ್ರಭಾವಿ ಪ್ರದರ್ಶನ ನೀಡಿದ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ವೇಗಿ ಇಶಾಂತ್ ಶರ್ಮಾ ಅಂತಾರಾಷ್ಟ್ರೀಯ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಪ್ರಗತಿ ಸಾಧಿಸಿದ್ದಾರೆ...
ದುಬೈ: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪ್ರಭಾವಿ ಪ್ರದರ್ಶನ ನೀಡಿದ ಸ್ಪಿನ್ನರ್ ಆರ್. ಅಶ್ವಿನ್ ಹಾಗೂ ವೇಗಿ ಇಶಾಂತ್ ಶರ್ಮಾ ಅಂತಾರಾಷ್ಟ್ರೀಯ ಟೆಸ್ಟ್ ರ್ಯಾಂಕಿಂಗ್ ಪಟ್ಟಿಯಲ್ಲಿ ಪ್ರಗತಿ ಸಾಧಿಸಿದ್ದಾರೆ.
ಬೌಲರ್ಗಳ ಪಟ್ಟಿಯಲ್ಲಿ 760 ಅಂಕ ಸಂಪಾದಿಸಿರುವ ಆರ್.ಅಶ್ವಿನ್ 8ನೇ ಸ್ಥಾನದಲ್ಲಿದ್ದರೆ, ಇಶಾಂತ್ ಶರ್ಮಾ 613 ಅಂಕಗಳೊಂದಿಗೆ 18ನೇ ಸ್ಥಾನ ಪಡೆದಿದ್ದು, ಅಗ್ರ 20ರಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಲಂಕಾ ನೆಲದಲ್ಲಿ 22 ವರ್ಷಗಳ ನಂತರ ಐತಿಹಾಸಿಕ ಸರಣಿ ಜಯಿಸಿದ ವಿರಾಟ್ ಕೊಹ್ಲಿ ಟೆಸ್ಟ್ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಕುಸಿತ ಕಂಡಿದ್ದಾರೆ. ಮಂಗಳವಾರ ಲಂಕಾ ವಿರುದ್ಧದ ಟೆಸ್ಟ್ ಸರಣಿ ಪೂರ್ಣಗೊಂಡ ನಂತರ ಬಿಡುಗಡೆಯಾದ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರ 10ರಿಂದ ಹೊರಬಿದ್ದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.