ಸ್ಟೀವ್ ಸ್ಮಿತ್ 
ಕ್ರೀಡೆ

ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾದ ಯಶಸ್ವಿ ನಾಯಕನಾಗಲಿದ್ದಾರೆ: ಮೈಕಲ್ ಕ್ಲಾರ್ಕ್

ಆಸ್ಟ್ರೇಲಿಯಾ ಆಟಗಾರ ಸ್ಟೀವ್ ಸ್ಮಿತ್ ತಂಡದ ನಾಯಕರಾಗಿರುವುದು ಅವರ ಬ್ಯಾಟಿಂಗ್ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್...

ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಆಟಗಾರ ಸ್ಟೀವ್ ಸ್ಮಿತ್ ತಂಡದ ನಾಯಕರಾಗಿರುವುದು ಅವರ ಬ್ಯಾಟಿಂಗ್ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್ ಅಭಿಪ್ರಾಯಪಟ್ಟಿದ್ದಾರೆ.

ಸ್ಟೀವ್ ಸ್ಮಿತ್ ಗೆ ಸೂಕ್ತ ಸಮಯದಲ್ಲಿ ತಂಡದ ನಾಯಕನ ಜವಾಬ್ದಾರಿಯನ್ನು ನೀಡಲಾಗಿದ್ದು ತಂಡವನ್ನು ಯಶಸ್ವಿಯಾಗಿ ಮುನ್ನಡೆಸಲಿದ್ದಾರೆ ಎಂದು ಮೈಕಲ್ ಕ್ಲಾರ್ಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸ್ಮಿತ್ ನೇತೃತ್ವದಲ್ಲಿ ಆಸ್ಟ್ರೇಲಿಯಾ ತಂಡ ಬಾಂಗ್ಲಾ ದೇಶದಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನು ಎದುರಿಸಲಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 215 ರನ್ ಗಳಿಸಿದ್ದ ಸ್ಮಿತ್ ಅತ್ಯುತ್ತಮ ಫಾರ್ಮ್ ನಲ್ಲಿದ್ದು ತಂಡದ ನಾಯಕತ್ವವನ್ನು ವಹಿಸಿಕೊಳ್ಳಲು ಸಮರ್ಥರಾಗಿರುವುದನ್ನು ಖಚಿತಪಡಿಸಿದ್ದಾರೆ. ಬ್ಯಾಟಿಂಗ್ ಹಾಗೂ ತಂಡದ ನಾಯಕತ್ವ ಎರಡನ್ನು ಸಮರ್ಥವಾಗಿ ನಿರ್ವಹಿಸಬೇಕಿದೆ ಎಂದು ಕ್ಲಾರ್ಕ್ ಹೇಳಿದ್ದಾರೆ. ಬಾಂಗ್ಲಾದೇಶದಲ್ಲಿ ನಡೆಯಲಿರುವ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಲಿದೆ ಎಂದು ಕ್ಲಾರ್ಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!