ಭಾರತ-ಪಾಕ್ ಕ್ರಿಕೆಟ್ ಉಳಿಯಬೇಕು
ವಿಶ್ವ ಕ್ರಿಕೆಟ್ನ ಸಾಂಪ್ರದಾಯಿಕ ಪ್ರತಿಸ್ಪರ್ಧಿ ಗಳಾಗಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಕ್ರಿಕೆಟ್ ಜೀವಂತವಾಗಿರಲು ದ್ವಿಪಕ್ಷೀಯ...
ಕರಾಚಿ: ವಿಶ್ವ ಕ್ರಿಕೆಟ್ನ ಸಾಂಪ್ರದಾಯಿಕ ಪ್ರತಿಸ್ಪರ್ಧಿ ಗಳಾಗಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಕ್ರಿಕೆಟ್ ಜೀವಂತವಾಗಿರಲು ದ್ವಿಪಕ್ಷೀಯ ಕ್ರಿಕೆಟ್ ಸರಣಿ ಅನಿವಾರ್ಯ ಎಂದು ಪಾಕ್ನ ಟೆಸ್ಟ್ ನಾಯಕ ಮಿಸ್ಬಾ ಉಲ್ ಹಕ್ ಅಭಿಪ್ರಾಯಪಟ್ಟಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವೆ ನಿರಂತರವಾಗಿ ಕ್ರಿಕೆಟ್ ಟೂರ್ನಿಗಳು ನಡೆಯಬೇಕು ಎಂದು ಈ ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ಯಾವುದೇ ಕಾರಣಕ್ಕೂ ಕ್ರಿಕೆಟ್ ಜತೆ ರಾಜಕೀಯವನ್ನು ಬೆರೆಸಬಾರದು.
ಈ ಹಿಂದೆ ಸಾಕಷ್ಟು ಸಮಸ್ಯೆಗಳನ್ನು ಕ್ರಿಕೆಟ್ ಸರಣಿಗಳ ಮೂಲಕ ಬಗೆಹರಿಸಿಕೊಳ್ಳಲಾಗಿದೆ. ಈ ಎರಡೂ ದೇಶಗಳ ನಡುವಣ ಟೂರ್ನಿಯನ್ನು ಜೀವಂತವಾಗಿ ಉಳಿಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ಸರಣಿ ನಡೆಯುವ ಬಗ್ಗೆ ವಿಶ್ವಾಸವಿದೆ ಎಂದರು.