ಕ್ರೀಡೆ

ಸಿಎಬಿ ನೂತನ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಆಯ್ಕೆ

Srinivas Rao BV

ನವದೆಹಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಬಂಗಾಳ ಕ್ರಿಕೆಟ್ ಅಸೋಸಿಯೇಷನ್(ಸಿಎಬಿ) ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಬಿಸಿಸಿಐ ಮಾಜಿ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರ ನಿಧನದಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಸೌರವ್ ಗಂಗೂಲಿ ಅವರನ್ನು ಆಯ್ಕೆ ಮಾಡಲಾಗಿದೆ.

ದಿವಂಗತ ಜಗಮೋಹನ್ ದಾಲ್ಮಿಯಾ ಅವರು ಪಶ್ಚಿಮ ಬಂಗಾಳ ಅಧ್ಯಕ್ಷರಾಗಿದ್ದರು. ಸಿಎಬಿ ಅಧ್ಯಕ್ಷರಾಗಿರುವ ಪ್ರಥಮ ಮೊದಲ ಟೆಸ್ಟ್ ಆಟಗಾರ ಸೌರವ್ ಗಂಗೂಲಿಯಾಗಿದ್ದಾರೆ. ದಾಲ್ಮಿಯಾ ಅವರ ಪುತ್ರ ಅವಿಶೇಕ್ ಅವರನ್ನು ಸಿಎಬಿಯ ಜಂಟಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.  

ಸಿಎಬಿ ಸಭೆ ಬಳಿಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೌರವ್ ಗಂಗೂಲಿ ಅವರ ಆಯ್ಕೆಯನ್ನು ಪ್ರಕಟಿಸಿದ್ದಾರೆ. ಸಿಎಬಿ ಅಧ್ಯಕ್ಷರಾಗಿ ಆಯ್ಕೆಯಾದ ಬಗ್ಗೆ ಪ್ರತಿಕ್ರಿಯಿಸಿರುವ ಗಂಗೂಲಿ, ತಕ್ಷಣದಿಂದಲೇ ಅಧಿಕಾರ ಸ್ವೀಕರಿಸುತ್ತಿರುವುದಾಗಿ ತಿಳಿಸಿದ್ದಾರೆ. ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೂ ಸೌರವ್ ಗಂಗೂಲಿ ಧನ್ಯವಾದ ಅರ್ಪಿಸಿದ್ದಾರೆ.

SCROLL FOR NEXT