ಮಯಾಂಕ್ ಅಗರ್‍ವಾಲ್ 
ಕ್ರೀಡೆ

ಮಯಾಂಕ್ ಅಬ್ಬರಕ್ಕೆ ತತ್ತರಿಸಿದ ಹರಿಣಗಳು

ಕರ್ನಾಟಕದ ಯುವ ಹಾಗೂ ಸ್ಫೋಟಕ ಆಟಗಾರ ಮಯಾಂಕ್ ಅಗರ್‍ವಾಲ್ (87 ರನ್, 49 ಎಸೆತ, 12 ಬೌಂಡರಿ, 2 ಸಿಕ್ಸರ್) ಹಾಗೂ ಮನನ್ ವೊಹ್ರಾ....

ಕರ್ನಾಟಕದ ಯುವ ಹಾಗೂ ಸ್ಫೋಟಕ ಆಟಗಾರ ಮಯಾಂಕ್ ಅಗರ್‍ವಾಲ್ (87 ರನ್, 49 ಎಸೆತ, 12 ಬೌಂಡರಿ, 2 ಸಿಕ್ಸರ್) ಹಾಗೂ ಮನನ್ ವೊಹ್ರಾ (56 ರನ್, 42 ಎಸೆತ, 8 ಬೌಂಡರಿ, 1 ಸಿಕ್ಸರ್) ಅವರುಗಳ ಅತ್ಯಾಕರ್ಷಕ ಬ್ಯಾಟಿಂಗ್ ನೆರವಿನಿಂದ ಭಾರತ ಎ ತಂಡ ದಕ್ಷಿಣ ಆಫ್ರಿಕಾ ವಿರುದ್ದ ಏಕೈಕ ಚುಟುಕು ಅಭ್ಯಾಸ ಪಂದ್ಯದಲ್ಲಿ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.

ಮಂಗಳವಾರ ಮಾಡೆಲ್ ಸ್ಪೋರ್ಟ್ಸ್  ಕಾಂಪ್ಲೆಕ್ಸ್ ಕ್ರೀಡಾಂಗಣದಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ ಎ ತಂಡ 8 ವಿಕೆಟ್‍ಗಳ ಸುಲಭ ಜಯ ಪಡೆಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಮುಂದಾದ ದಕ್ಷಿಣ ಆಫ್ರಿಕಾ ತಂಡ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 189 ರನ್ ದಾಖಲಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ ಎ ತಂಡ, ಇನ್ನೂ ಎರಡು ಎಸೆತಗಳು ಬಾಕಿ ಇರುವಂತೆಯೇ ಅಂದರೆ 19.4 ಓವರ್‍ಗಳಲ್ಲಿ ಕೇವಲ 2 ವಿಕೆಟ್ ಕಳೆದುಕೊಂಡು 193 ರನ್ ದಾಖಲಿಸುವ ಮೂಲಕ ಜಯಭೇರಿ ಬಾರಿಸಿತು. ದಕ್ಷಿಣ ಆಫ್ರಿಕಾ ತಂಡ ನೀಡಿದ ಕಠಿಣ ಗುರಿಯನ್ನು ಬೆನ್ನಟ್ಟಿದ ಭಾರತ ಎ ತಂಡಕ್ಕೆ ಆರಂಭಿಕರಾದ ಮನನ್ ವೊಹ್ರಾ ಹಾಗೂ ಮಾಯಾಂಕ್ ಅಗರ್‍ವಾಲ್ ತಂಡಕ್ಕೆ ಭರ್ಜರಿ ಆರಂಭ ನೀಡಿದರು.

ಆರಂಭಿಕ 12.4 ಓವರ್‍ಗಳಲ್ಲಿ ದಕ್ಷಿಣ ಆಫ್ರಿಕಾ ಬೌಲಿಂಗ್ ದಾಳಿಯನ್ನು ಮನಬಂದಂತೆ ದಂಡಿಸಿದ ಈ ಜೋಡಿ, 119 ರನ್‍ಗಳ ಅಮೋಘ ಜತೆಯಾಟ ನೀಡಿ ತಂಡವನ್ನು ಜಯದ ಸನಿಹಕ್ಕೆ ತಂದು ನಿಲ್ಲಿಸಿದರು. ದಕ್ಷಿಣ ಆಫ್ರಿಕಾ  ಪರ, ನಾಯಕ  ಡುಪ್ಲೆಸಿಸ್ (42 ರನ್, 27 ಎಸೆತ, 7 ಬೌಂಡರಿ) ಹಾಗೂ ಜೆ.ಪಿ.ಡುಮಿನಿ (ಅಜೇಯ 68 ರನ್, 32 ಎಸೆತ, 2 ಬೌಂಡರಿ, 6 ಸಿಕ್ಸರ್) ಇನ್ನಿಂಗ್ಸ್ ನಲ್ಲಿ ರನ್ ಗತಿಯನ್ನು ಹೆಚ್ಚಿಸಿದರು. ಹಾಗಾಗಿ ಪ್ರವಾಸಿಗರು ಬೃಹತ್ ಮೊತ್ತ ಪೇರಿಸಲು ಸಾಧ್ಯವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!