ರಾಜೀವ್ ಶುಕ್ಲಾ 
ಕ್ರೀಡೆ

ಬಿಸಿಸಿಐ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನನ್ನ ಹೆಸರಿರಲಿಲ್ಲ: ರಾಜೀವ್ ಶುಕ್ಲಾ

ಬಿಸಿಸಿಐ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶಶಾಂಕ್ ಮನೋಹರ್ ಗೆ ಐಪಿಎಲ್ ಅಧ್ಯಕ್ಷ ರಾಜೀವ್ ಶುಕ್ಲಾ ಬೆಂಬಲ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಬಿಸಿಸಿಐ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶಶಾಂಕ್ ಮನೋಹರ್ ಗೆ ಐಪಿಎಲ್ ಅಧ್ಯಕ್ಷ ರಾಜೀವ್ ಶುಕ್ಲಾ ಬೆಂಬಲ ವ್ಯಕ್ತಪಡಿಸಿದ್ದಾರೆ.
"ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ನನ್ನ ಹೆಸರಿರಲಿಲ್ಲ, ನಾನು ಭಾರತೀಯ ಕ್ರಿಕೆಟ್ ಮಂಡಳಿಯ ನಿಷ್ಠಾವಂತ ಸೈನಿಕ ಎಂದು ರಾಜೀವ್ ಶುಕ್ಲಾ ಸ್ಪಷ್ಟಪಡಿಸಿದ್ದಾರೆ. ಶಶಾಂಕ್ ಮನೋಹರ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. 
ಬಿಸಿಸಿಐ ನ ಅತ್ಯುನ್ನತ ಹುದ್ದೆಗೆ ಶಶಾಂಕ್ ಮನೋಹರ್ ಅವರ ಹೆಸರಿನೊಂದಿಗೆ ರಾಜೀವ್ ಶುಕ್ಲಾ ಅವರ ಹೆಸರೂ ಕೇಳಿಬಂದಿತ್ತು. ಶಶಾಂಕ್ ಮನೋಹರ್ ಸಮರ್ಥ ವ್ಯಕ್ತಿಯಾಗಿದ್ದು ಅವರನ್ನು ಬೆಂಬಲಿಸುತ್ತೇನೆ ಎಂದು ಶುಕ್ಲಾ ತಿಳಿಸಿದ್ದಾರೆ.
ಐಸಿಸಿ ಅಧ್ಯಕ್ಷ ಶ್ರೀನಿವಾಸನ್ ಅವರು ಬಿಸಿಸಿಐ ಸಭೆಗಳಲ್ಲಿ ಭಾಗವಹಿಸುವಂತಿಲ್ಲ. ಆದರೆ ಮತದಾನದಂತಹ ಸಂದರ್ಭಗಳು ಎದುರಾದರೆ ಅದರಲ್ಲಿ ಭಾಗವಹಿಸಬಹುದು ಎಂದು ಶುಕ್ಲಾ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ