ಪಾಕಿಸ್ತಾನ ವಿರುದ್ಧದ ಪಂದ್ಯದ ಕ್ಷಣ 
ಕ್ರೀಡೆ

ಅಜ್ಲಾನ್ ಶಾ ಕಪ್: ಪಾಕಿಸ್ತಾನದ ವಿರುದ್ಧ ಭಾರತಕ್ಕೆ 5-1 ಅಂತರದ ಜಯ

ಮಲೇಷ್ಯಾದಲ್ಲಿ ನಡೆಯುತ್ತಿರುವ ಸುಲ್ತಾನ್ ಅಜ್ಲಾನ್ ಶಾ ಕಪ್ ಹಾಕಿ ಟೂರ್ನಿಯಲ್ಲಿ ಮಂಗಳವಾರ ಪಾಕಿಸ್ತಾನ ತಂಡವನ್ನು ಭಾರತ 5-1 ಅಂತರದಿಂದ ಭರ್ಜರಿಯಾಗಿ ಮಣಿಸಿ ತನ್ನ ಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಕೌಲಾಲಂಪುರ: ಮಲೇಷ್ಯಾದಲ್ಲಿ ನಡೆಯುತ್ತಿರುವ ಸುಲ್ತಾನ್ ಅಜ್ಲಾನ್ ಶಾ ಕಪ್ ಹಾಕಿ ಟೂರ್ನಿಯಲ್ಲಿ ಮಂಗಳವಾರ ಪಾಕಿಸ್ತಾನ ತಂಡವನ್ನು ಭಾರತ 5-1 ಅಂತರದಿಂದ ಭರ್ಜರಿಯಾಗಿ ಮಣಿಸಿ  ತನ್ನ ಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಮಂಗಳವಾರ ನಡೆದ ಪಂದ್ಯದಲ್ಲಿ ಕನ್ನಡಿಗ ಎಸ್‌ವಿ ಸುನೀಲ್(10, 41ನೇ ನಿಮಿಷ) ಆಕರ್ಷಕ 2 ಗೋಲು ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಇದರಿಂದ ಭಾರತ  ಅಂಕಪಟ್ಟಿಯಲ್ಲಿ 9 ಅಂಕಗಳೊಂದಿಗೆ 2ನೇ ಸ್ಥಾನಕ್ಕೇರಿದ್ದು, ಫೈನಲ್ ಆಸೆ ಜೀವಂತವಾಗಿರಿಸಿಕೊಂಡಿದೆ. ಕೆನಡ ವಿರುದ್ಧದ ಕಳೆದ ಪಂದ್ಯದ ಗೆಲುವಿನ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿದ  ಭಾರತ ಆರಂಭದಲ್ಲೇ ಆಕ್ರಮಣಕಾರಿ ಆಟಕ್ಕಿಳಿಯಿತು. ಇದಕ್ಕೆ ತಕ್ಕಂತೆ ಮನ್‌ಪ್ರೀತ್ ಸಿಂಗ್ 4ನೇ ನಿಮಿಷದಲ್ಲೇ ಚುರುಕಿನ ಫೀಲ್ಡ್ ಗೋಲು ಸಿಡಿಸಿ ಭಾರತ ತಂಡಕ್ಕೆ ಮುನ್ನಡೆ ತಂದಿತ್ತರು.  ಆದರೆ ಪಾಕಿಸ್ತಾನ 7ನೇ ನಿಮಿಷದಲ್ಲಿ ಮಹಮದ್ ಇರ್ಫಾನ್ ಮೂಲಕ ಗೋಲು ಸಿಡಿಸಿ ಅಷ್ಟೇ ವೇಗದಲ್ಲಿ ತಿರುಗೇಟು ನೀಡಿತು.

ಬಳಿಕ ಮತ್ತೆ ಪಾಕಿಸ್ತಾನದ ವಿರುದ್ಧ ತಿರುಗಿಬಿದ್ದ ಭಾರತದ ಆಟಗಾರರು ಸಾಕಷ್ಟು ಸಮಯ ಚೆಂಡು ಪಾಕ್ ಆಟಗಾರರ ಸ್ಟಿಕ್‌ಗೆ ಸಿಗದಂತೆ ನೋಡಿಕೊಂಡರು. ಕೊನೇ ಕ್ಷಣದಲ್ಲಿ ರೂಪಿಂದರ್ ಪಾಲ್  ಸಿಂಗ್ ಸಿಕ್ಕ ಪೆನಾಲ್ಟಿ ಶೂಟೌಟ್ ಅನ್ನು ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ವಿಫಲರಾದರು. ಆದರೆ  ಉಪನಾಯಕ ಸುನೀಲ್ ಫೀಲ್ಡ್‌ನಲ್ಲಿ ತಮ್ಮ ಚುರುಕಿನ ಆಟದ ಮೂಲಕ ಪಾಕ್ ತಂಡವನ್ನು  ಒತ್ತಡಕ್ಕೆ ಸಿಲಕಿಸಿದರಲ್ಲದೇ, 10ನೇ ನಿಮಿಷದಲ್ಲಿ 25 ಯಾರ್ಡ್ ದೂರದಿಂದ ಮಿಂಚಿನ ಗೋಲು ಸಿಡಿಸಿ ಮೊದಲ ಕ್ವಾರ್ಟರ್ ಅವಧಿಯಲ್ಲಿ 2-1 ಮುನ್ನಡೆ ತಂದಿತ್ತರು. ಬಳಿಕ ತೃತೀಯ ಕ್ವಾರ್ಟರ್  ಮುಕ್ತಾಯಕ್ಕೆ 4 ನಿಮಿಷಗಳಿದ್ದಾಗ ಕೊಡಗಿನ ಕುವರ ಸುನೀಲ್ ತಮ್ಮ 2ನೇ ಗೋಲು ಸಿಡಿಸಿ ಜಯ ಖಚಿತಪಡಿಸಿದರು. 50ನೇ ನಿಮಿಷದಲ್ಲಿ ತಲ್ವಿಂದರ್ ಸಿಂಗ್ ಮತ್ತೊಂದು ಗೋಲು ಬಾರಿಸಿ  ಗೆಲುವಿನ ಅಂತರ ಹಿಗ್ಗಿಸಿದರು.

ಅಂತಿಮವಾಗಿ ಪಂದ್ಯದ ಮುಕ್ತಾಯದ ವೇಳೆಗೆ ಭಾರತ ತಂಡ 5-1 ಗೋಲುಗಳ ಅಂತರದಲ್ಲಿ ಪಾಕಿಸ್ತಾನ ತಂಡವನ್ನು ಮಣಿಸುವ ಮೂಲಕ ತನ್ನ ಫೈನಲ್ ಕನಸನ್ನು  ಜೀವಂತವಾಗಿರಿಸಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT