ರಿಯೋ ಒಲಿಂಪಿಕ್ಸ್: ಪತ್ರಕರ್ತರ ಬಸ್ ಮೇಲೆ ಗುಂಡಿನ ದಾಳಿ, ಯಾವುದೇ ಪ್ರಾಣಾಪಾಯವಿಲ್ಲ
ರಿಯೋ ಒಲಿಂಪಿಕ್ಸ್ ಕ್ರೀಡಾಕೂಟವನ್ನು ವರದಿ ಮಾಡಲು ತೆರಳಿರುವ ಪತ್ರಕರ್ತರ ಬಸ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ...
ರಿಯೋ ಡಿ ಜನೈರೋ: ರಿಯೋ ಒಲಿಂಪಿಕ್ಸ್ ಕ್ರೀಡಾಕೂಟವನ್ನು ವರದಿ ಮಾಡಲು ತೆರಳಿರುವ ಪತ್ರಕರ್ತರ ಬಸ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಬಾಸ್ಕೇಟ್ ಬಾಲ್ ಕ್ರೀಡಾಂಗಣದಿಂದ ಒಲಿಂಪಿಕ್ ಪಾರ್ಕ್ ನತ್ತ 12 ಪತ್ರಕರ್ತರನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಗುಂಡಿನ ದಾಳಿ ನಡೆದಿದ್ದು ದಾಳಿಯಲ್ಲಿ ಮೂವರು ಪತ್ರಕರ್ತರು ಗಾಯಗೊಂಡಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ದಾಳಿಯಿಂದಾಗಿ ಬಸ್ ನ ಎರಡು ಕಿಟಕಿ ಗಾಜುಗಳು ಚೂರಾಗಿವೆ. ಈ ಘಟನೆಯಿಂದಾಗಿ ಒಲಿಂಪಿಕ್ಸ್ ಸುರಕ್ಷತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. 85 ಸಾವಿರ ಸೈನಿಕರು ಮತ್ತು ಪೊಲೀಸರು ಭದ್ರತೆಯಲ್ಲಿ ತೊಡಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.