ರಿಯೋ ಒಲಿಂಪಿಕ್ಸ್ ನಲ್ಲಿ ಭಾರತ ಪರ ಮೊದಲ ಪದಕ ಗಳಿಸಿದ ಕುಸ್ತಿಪಟು ಸಾಕ್ಷಿ ಮಲ್ಲಿಕ್ ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತದ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಅಭಿನಂದಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಾಕ್ಷಿ ಮಲ್ಲಿಕ್ ಗೆ ಗಣ್ಯರಿಂದ ಅಭಿನಂದನೆಯ ಮಹಾಪೂರವೇ ಹರಿದುಬರುತ್ತಿದೆ. ಟ್ವೀಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಕ್ಷಿರನ್ನು ಅಭಿನಂದಿಸಿದ್ದು, ನಿಮ್ಮ ಈ ಅಭೂತಪೂರ್ವ ಸಾಧನೆ ಭಾರತದ ಇತರ ಕ್ರೀಡಾಪಟುಗಳಿಗೂ ಪ್ರೇರಣೆಯಾಗಲಿದೆ ಎಂದರು. ಭಾರತದ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಸಹ ಸಾಕ್ಷಿ ಹಾಗೂ ಅವರ ತಂಡವನ್ನು ಅಭಿನಂದಿಸಿದ್ದಾರೆ.