ಕ್ರೀಡೆ

ಒಲಿಂಪಿಕ್ ಪದಕ ವಿಜೇತ ಸಾಕ್ಷಿ ಮಲಿಕ್ ಗೆ ಖೇಲ್ ರತ್ನ ಪ್ರಶಸ್ತಿ

Lingaraj Badiger
ನವದೆಹಲಿ: ರಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ತಂದುಕೊಟ್ಟ ಕುಸ್ತಿಪಟು ಸಾಕ್ಷಿ ಮಲಿಕ್ ಅವರಿಗೆ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆಯಲಿದ್ದಾರೆ.
ಸರ್ಕಾರದ ನಿಯಮದಂತೆ ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುವವರಿಗೆ ಖೇಲ್ ರತ್ನ ಪ್ರಶಸ್ತಿ ತಾನಾಗಿಯೇ ಒಲಿದು ಬರಲಿದೆ. 
ಸಾಕ್ಷಿ ಮಲಿಕ್ ಅವರು ಇದುವರೆಗೂ ಅರ್ಜುನ್ ಪ್ರಶಸ್ತಿ ಪಡೆದಿಲ್ಲ. ಆದರೆ ಸರ್ಕಾರದ ನಿಯಮದಂತೆ ಈಗ ಖೇಲ್ ರತ್ನ ಪ್ರಶಸ್ತಿಗೆ ಅವರನ್ನು ನೇರವಾಗಿ ಪರಿಗಣಿಸಲಾಗುತ್ತದೆ.
ಈಗಾಗಲೇ ರಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ಭಾರತದ ಜಿಮ್ನಾಸ್ಟಿಕ್ ಪಟು ದೀಪಾ ಕರ್ಮಾಕರ್ ಹಾಗೂ ಶೂಟರ್ ಜೀತು ರಾಯ್ ಹೆಸರನ್ನು ಪ್ರತಿಷ್ಠಿತ ರಾಜೀವ್‌ ಗಾಂಧಿ ಖೇಲ್‌ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.
SCROLL FOR NEXT