ಸುಧಾ ಸಿಂಗ್ 
ಕ್ರೀಡೆ

ರಾಜ್ಯ ಸರ್ಕಾರ ಅಥ್ಲೀಟ್ ಸುಧಾ ಸಿಂಗ್‌ ಚಿಕಿತ್ಸಾ ವೆಚ್ಚ ಭರಿಸಲಿದೆ: ಸಿಎಂ

ರಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದ ಅಥ್ಲೀಟ್ ಸುಧಾ ಸಿಂಗ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು ಝಿಕಾ ಜ್ವರದ ಶಂಕೆ ಎದುರಾಗಿದೆ.

ಬೆಂಗಳೂರು: ರಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದ ಅಥ್ಲೀಟ್ ಸುಧಾ ಸಿಂಗ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು ಝಿಕಾ ಜ್ವರದ ಶಂಕೆ ಎದುರಾಗಿದೆ.
ಸುಧಾ ಸಿಂಗ್ ರಿಯೋದಿಂದ ಹಿಂದಿರುಗಿದ ನಂತರ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಆಥ್ಲೀಟ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸುಧಾ ಸಿಂಗ್ ಅವರ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.
ಸುಧಾಗೆ ಶೀಘ್ರ ಗುಣಮುಖರಾಗುವಂತೆ ಹಾರೈಸಿರುವ ಸಿಎಂ, ಕ್ರೀಡಾಪಟುವಿನ ಚಿಕಿತ್ಸೆ ಬಗ್ಗೆ ಗಮನ ಹರಿಸುವಂತೆ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಸಂಸದೀಯ ಕಾರ್ಯದರ್ಶಿ ಗೋವಿಂರಾಜು ಅವರಿಗೆ ಸೂಚಿಸಿದ್ದಾರೆ.
ಈ ಹಿಂದೆ ಎಬೊಲಾ ವೈರಸ್ ವಿಶ್ವದ ನಿದ್ದೆಗೆಡಿಸಿತ್ತು. ಇದೀಗ ಬ್ರೆಜಿಲ್ ನಲ್ಲಿ ಝಿಕಾ ವೈರಸ್ ವಿಶ್ವದಾದ್ಯಂತ ತಾಂಡವವಾಡುತ್ತಿದೆ. ಇದರಿಂದಾಗಿ ರಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದ ಸುಧಾಗೂ ಝಿಕಾ ಜ್ವರಕ್ಕೆ ತುತ್ತಾಗಿದ್ದಾರೆ ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT