ಕ್ರೀಡೆ

ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಾಕರ್, ಜೀತು ರಾಯ್ ಗೆ ಖೇಲ್ ರತ್ನ ಪ್ರಶಸ್ತಿ ಪ್ರದಾನ

Lingaraj Badiger
ನವದೆಹಲಿ: ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಕಂಚಿನ ಪದಕ ಗೆದ್ದ ಕುಸ್ತಿಪಟು ಸಾಕ್ಷಿ ಮಲಿಕ್, ರಿಯೋ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಮೊದಲ ಬಾರಿ ಫೈನಲ್ ಪ್ರವೇಶಿಸಿದ್ದ ಭಾರತದ ಜಿಮ್ನಾಸ್ಟಿಕ್ ಪಟು ದೀಪಾ ಕರ್ಮಾಕರ್ ಹಾಗೂ ಶೂಟರ್ ಜೀತು ರಾಯ್ ಅವರಿಗೆ ಸೋಮವಾರ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು,
ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕ್ರೀಡಾ ಸಾಧಕರಿಗೆ ರಾಜೀವ್ ಖೇಲ್ ರತ್ನ ಪ್ರಶಸ್ತಿ, ಧ್ಯಾನ್ ಚಂದ್ ಪ್ರಶಸ್ತಿ, ಅರ್ಜು ಪ್ರಶಸ್ತಿ ಹಾಗೂ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಿದರು.
ಕರ್ನಾಟಕದ ಹಾಕಿ ಆಟಗಾರ ವಿ.ಆರ್.ರಘುನಾಥ್, ಕ್ರಿಕೆಟ್ ಆಟಗಾರ ಅಜಿಂಕ್ಯ ರಹಾನೆ, ಲಲಿತ್ ಬಾಬರ್, ಶಿವ ಥಾಪಾ ಹಾಗೂ ಅಪೂರ್ವಿ ಚಾಂಡೇಲಾ ಸೇರಿದಂತೆ 15 ಕ್ರೀಡಾಪಟುಗಳನ್ನು ಅರ್ಜುನ ಪ್ರಶಸ್ತಿ ಸ್ವೀಕರಿಸಿದರು.
ಇನ್ನು ದೀಪಾ ಕರ್ಮಾಕರ್ ಕೋಚ್ ಬಿಶ್ವೇಶ್ವರ್ ನಂದಿ ಸೇರಿದಂತೆ ಆರು ಮಂದಿಗೆ ಈ ಸಾಲಿನ ದ್ರೋಣಾಚಾರ್ಯ ಪ್ರಶಸ್ತಿ ಪಡೆದರು. 
ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಜಿಮ್ನಾಸ್ಟರ್ ಎಂಬ ಹೆಗ್ಗಳಿಕೆಯೊಂದಿಗೆ ದೇಶದ ಜನತೆಯ ಮನ ಗೆದ್ದಿದ್ದ ದೀಪಾ ಕರ್ಮಾಕರ್ ಅವರಿಗೆ ಸ್ವಲ್ಪದರಲ್ಲಿ ಐತಿಹಾಸಿಕ ಕಂಚಿನ ಪದಕ ಕೈತಪ್ಪಿತ್ತು.
ಇನ್ನು ಸರ್ಕಾರದ ನಿಯಮದಂತೆ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಪಿ.ವಿ.ಸಿಂಧು ಹಾಗೂ ಸಾಕ್ಷಿ ಮಲಿಕ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ತಾನಾಗಿಯೇ ಒಲಿದು ಬಂದಿದೆ.
SCROLL FOR NEXT