ಮೀರ್ಪುರ: ಐಸಿಸಿ ಅಂಡರ್ 19 ವಿಶ್ವಕಪ್ ಸೆಮಿಫೈನಲ್ ನಲ್ಲಿ ಬಾಂಗ್ಲಾದೇಶವನ್ನು ಮಣಿಸಿದ ವೆಸ್ಟ್ ಇಂಡೀಸ್ ಫೈನಲ್ ಗೆ ಪ್ರವೇಶಿಸಿದೆ.
ಸದ್ಯ ಫೈನಲ್ ಗೆ ಪ್ರವೇಶಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿವೆ. ಫೆಬ್ರವರಿ 14 ರಂದು ಪಂದ್ಯ ನಡೆಯಲಿದೆ.
ಶೇರ್ ಇ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ವೆಸ್ಟ್ ಇಂಡೀಸ್ ಗೆ ಗೆಲ್ಲಲು 226 ರನ್ ಗಳನ್ನು ನೀಡಿತ್ತು. ಸಾಧಾರಣ ಮೊತ್ತ ಬೆನ್ನಟ್ಟಿದ ವೆಸ್ಟ್ ಇಂಡೀಸ್ 48.4 ಓವರ್ ಗಳಲ್ಲಿ 230 ರನ್ ಗಳಿಸಿ ಜಯದ ಗುರಿ ತಲುಪಿತು.