ಸಾಂದರ್ಭಿಕ ಚಿತ್ರ 
ಕ್ರೀಡೆ

ವಾಲಿಬಾಲ್ ಸೆಣಸಿಗೆ ಉದ್ಯಾನ ನಗರಿ ಸಜ್ಜು

ಆತಿಥೇಯ ಕರ್ನಾಟಕ ಮತ್ತು ರಾಜಸ್ಥಾನ ತಂಡಗಳು, ಜನವರಿ ರಂದು ಆರಂಭವಾಗಲಿರುವ 64ನೇ ರಾಷ್ಟ್ರೀಯ ಹಿರಿಯರ ವಾಲಿಬಾಲ್ ಚಾಂಪಿಯನ್‌ಷಿಪ್‌ನ ...

ಬೆಂಗಳೂರು: ಆತಿಥೇಯ ಕರ್ನಾಟಕ ಮತ್ತು ರಾಜಸ್ಥಾನ ತಂಡಗಳು, ಜನವರಿ ರಂದು ಆರಂಭವಾಗಲಿರುವ 64ನೇ ರಾಷ್ಟ್ರೀಯ ಹಿರಿಯರ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಪುರುಷರ ವಿಭಾಗದ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಇಲ್ಲಿ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ 9 ದಿನಗಳ ಕಾಲ ನಡೆಯಲಿರುವ ಚಾಂಪಿಯನ್‌ಷಿಪ್‌ನ ಪುರುಷರ ವಿಭಾಗದಲ್ಲಿ 27 ಹಾಗೂ ಮಹಿಳಾ ವಿಭಾಗದಲ್ಲಿ 24 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಚಾಂಪಿಯನ್‌ಷಿಪ್‌ನಲ್ಲಿ ಹಲವಾರು ಅಂತಾರಾಷ್ಟ್ರೀಯ ತಾರೆಗಳ ಸಹಿತ ವಿವಿಧ ತಂಡಗಳ 1500ಕ್ಕೂ ಹೆಚ್ಚು ಆಟಗಾರ/ಆಟಗಾರ್ತಿಯರು ಭಾಗವಹಿಸಲಿದ್ದಾರೆ. ಮಹಿಳಾ ವಿಭಾಗದ ಆರಂಭಿಕ ಪಂದ್ಯದಲ್ಲಿ ಭಾರತೀಯ ರೈಲ್ವೆ ಮತ್ತು ಮಹಾರಾಷ್ಟ್ರ ತಂಡಗಳು ಸೆಣಸಲಿವೆ.

ಶನಿವಾರ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸಂಜೆ 5ಕ್ಕೆ ಟೂರ್ನಿಯ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ, ರಾಜ್ಯ ಸಚಿವರಾದ ಆರ್.ರೋಷನ್ ಬೇಗ್, ರಾಮಲಿಂಗಾ ರೆಡ್ಡಿ, ಕೆ.ಅಭಯಚಂದ್ರ ಜೈನ್ ಮತ್ತು ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಉದ್ಘಾಟನಾ ಸಮಾರಂಭದ ಬಳಿಕ 6 ಗಂಟೆಗೆ ಪಂದ್ಯಗಳು ಆರಂಭವಾಗಲಿವೆ.

ಪುರುಷರ ವಿಭಾಗದಲ್ಲಿ ಕರ್ನಾಟಕ ತಂಡ ತಮಿಳುನಾಡು, ರಾಜಸ್ಥಾನ್ ಮತ್ತು ಸರ್ವಿಸಸ್ ತಂಡಗಳೊಂದಿಗೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಮಹಿಳಾ ವಿಭಾಗದಲ್ಲಿ ರಾಜ್ಯ ತಂಡ ಛತ್ತೀಸ್‌ಗಢ, ತ್ರಿಪುರಾ ಹಾಗೂ ಒಡಿಶಾ ತಂಡಗಳ ಜತೆ ಸಿ ಗುಂಪಿನಲ್ಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?