ಭಾರತ ವಿರುದ್ಧದ ಸರಣಿ: ಆಸ್ಟ್ರೇಲಿಯಾ ತಂಡ ಪ್ರಕಟ 
ಕ್ರೀಡೆ

ಭಾರತ ವಿರುದ್ಧದ ಸರಣಿ: ಆಸ್ಟ್ರೇಲಿಯಾ ತಂಡ ಪ್ರಕಟ

ಭಾರತ ವಿರುದ್ಧದ ಏಕದಿನ ಸರಣಿಯ ಆರಂಭಿಕ ಮೂರು ಪಂದ್ಯಗಳಿಗೆ ಆಸ್ಟ್ರೆಲಿಯಾ ತಂಡವನ್ನು ಆಯ್ಕೆ ಮಾಡಲಾಗಿದೆ.

ಸಿಡ್ನಿ: ಇದೇ ತಿಂಗಳು ತವರಿನಲ್ಲಿ ನಡೆಯಲಿರುವ ಭಾರತ ವಿರುದ್ಧದ ಏಕದಿನ ಸರಣಿಯ ಆರಂಭಿಕ ಮೂರು ಪಂದ್ಯಗಳಿಗೆ ಆಸ್ಟ್ರೆಲಿಯಾ ತಂಡವನ್ನು ಆಯ್ಕೆ ಮಾಡಲಾಗಿದ್ದು, ಸ್ಪಿನ್ನರ್  ನಾಥನ್ ಲೇಯಾನ್ ಮತ್ತು ಅಲ ರೌಂಡರ್ ಶೇನ್ ವಾಟ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಸೋಮವಾರ ಕ್ರಿಕೆಟ್ ಆಸ್ಟ್ರೇಲಿಯಾ ಆಯ್ಕೆ ಸಮಿತಿ 13 ಆಟಗಾರರ ತಂಡವನ್ನು ಪ್ರಕಟಿಸಿದೆ. ಸರಣಿಯ ಆತಿಥ್ಯ ವಹಿಸಿರುವ ಪರ್ಥ್, ಮೆಲ್ಬರ್ನ್, ಮತ್ತು ಸಿಡ್ನಿಯಲ್ಲಿನ ಪಿಚ್ ಗಳು ವೇಗಿಗಳಿಗೆ ಸಹಕರಿಸುವ ನಿಟ್ಟಿನಲ್ಲಿ ಆಸ್ಟ್ರೇಲಿಯಾ ಬೌಲಿಂಗ್ ವಿಭಾಗದಲ್ಲಿ ವೇಗಿಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗಿದೆ. ಯುವ ಎಡಗೈ ವೇಗಿ ಜೋ ಪ್ಯಾರಿಸ್, ಸ್ಟಾಕ್ ಬೊಲೆಂಡ್ ಮತ್ತು ಕೆನ್ ರಿಚರ್ಡ್ ಸನ್ ಮತ್ತೆ ತಂಡಕ್ಕೆ ಮರಳಿದ್ದಾರೆ. ಹಿರಿಯ ಬೌಲರ್ ಗಳಾದ ಮಿಚೆಲ್ ಸ್ಟಾರ್ಕ್, ನಾಥನ್ ಕೌಲ್ಟರ್ ನೀಲ್ ಮತ್ತು ಪೀಟರ್ ಸಿಡ್ಲ್ ಗಾಯದ ಸಮಸ್ಯೆಯಿಂದಾಗಿ ಬೊಲೆಂಡ್ ಮತ್ತು ಪ್ಯಾರಿಸ್ ಗೆ ಸ್ಥಾನ ಸಿಕ್ಕಿದೆ. ಇನ್ನು ಆಲ್ ರೌಂಡರ್ ಶೇನ್ ವಾಟ್ಸನ್ ಜತೆಗೆ ಜೋ ಬರ್ನ್ಸ್ ಮತ್ತು ಜೇಮ್ಸ್ ಪ್ಯಾಟಿನ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಸ್ಕಾಟ್ ವಿಕ್ಟೋರಿಯಾ ತಂಡದ ಪರ ಆಕರ್ಷಕ ಪ್ರದರ್ಶನ ನೀಡಿ ಆಯ್ಕೆಗಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಾಗಿ ಅವರು ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಅರ್ಹರು. ಇನ್ನು ಜೋ ಪ್ಯಾರಿಸ್ ಸಹ ಯುವ ಸ್ವಿಂಗ್ ಬೌಲರ್ ಆಗಿದ್ದಾರೆ. ಸೀಮಿತ ಓವರ್ ನಲ್ಲಿ ಉತ್ತಮ ದಾಖಲೆ ಹೊಂದಿದ್ದಾರೆ ಎಂದು ಆಯ್ಕೆ ಸಮಿತಿ ಅಧ್ಯಕ್ಷ ರಾಡ್ ಮಾರ್ಷ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT