ಕ್ರೀಡೆ

ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಕರ್ನಾಟಕಕ್ಕೆ ಮತ್ತೆ ನಿರಾಸೆ

Srinivas Rao BV

ಕಟಕ್: ಎದುರಾಳಿ ತಂಡದ ಬ್ಯಾಟಿಂಗ್ ವಿಭಾಗವನ್ನು ಕಟ್ಟಿ ಹಾಕಲು ವಿಫಲವಾದ ಕರ್ನಾಟಕ ತಂಡ ಸೈಯದ್ ಮುಷ್ತಾಕ್ ಅಲಿ ಟಿ 20 ಟೂರ್ನಿಯಲ್ಲಿ ಎರಡನೇ ಬಾರಿ ಸೋಲನುಭವಿಸಿತು. ಆ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಎರಡನೇ ಪಂದ್ಯದಲ್ಲಿ ಸೋಲನುಭವಿಸಿದೆ.
ಟಾಸ್ ಗೆದ್ದ ಕರ್ನಾಟಕ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ನಂತರ 20 ಓವರ್ ಗಳಲ್ಲಿ 6 ವಿಕೆಟ್ ಗೆ 160 ರನ್ ದಾಖಲಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಉತ್ತರ ಪ್ರದೇಶ ತಂಡ 19 .1 ಓವರ್ ಗಳಲ್ಲಿ 5 ವಿಕೆಟ್ ಗೆ 161 ರನ್ ಗಳಿಸಿ ಜಯ ಸಾಧಿಸಿತು. ಆ ಮೂಲಕ ಉತ್ತರ ಪ್ರದೇಶ ತಂಡ ಆಡಿದ ಮೂರು ಪಂದ್ಯಗಳಲ್ಲಿ ಜಯ ಸಾಧಿಸುವುದರೊಂದಿಗೆ ಅಗ್ರ 12 ಅಂಕ ಸಂಪಾದಿಸಿ ಗುಂಪಿನಲ್ಲಿ ಅಗ್ರ ಸ್ಥಾನ ಪಡೆದಿದೆ.    
ತಹ ಉತ್ತಮ ಆರಂಭ: ಮೊದಲು ಬ್ಯಾಟಿಂಗ್ ಮಾಡಲು ಕಣಕ್ಕಿಳಿದ ಕರ್ನಾಟಕ ತಂಡಕ್ಕೆ ಆರಂಭಿಕ ಮೊಹಮದ್ ತಹ(45 ರನ್, 40 ಎಸೆತ, 5 ಬೌಂಡರಿ, 2 ಸಿಕ್ಸರ್) ಉತ್ತಮ ಆರಂಭ ನೀಡಿದರು. ಮತ್ತೊಬ್ಬ ಆರಂಭಿಕ ಮಯಾಂಕ್ ಅಗರ್ ವಾಲ್ 20, ರಾಬಿನ್ ಉತ್ತಪ್ಪ 25 ರನ್ ಗಳಿಸಿದರು. ಈ ಇಬ್ಬರು ಆಟಗಾರರು ಉತ್ತಮ ಆರಂಭ ಸಿಕ್ಕ ನಂತರ ವಿಕೆಟ್ ಒಪ್ಪಿಸಿದ್ದು ತಂಡಕ್ಕೆ ದುಬಾರಿಯಾಗಿ ಪರಿಣಮಿಸಿತು.

SCROLL FOR NEXT