ಧೋನಿ ವಿರುದ್ಧ ಜಾಮೀನು ರಹಿತ ವಾರಂಟ್
ಧಾರ್ಮಿಕ ಭಾವನೆಗೆ ದಕ್ಕೆ ತಂದ ಆರೋಪದಡಿಯಲ್ಲಿ ಟೀಂ ಇಂಡಿಯಾದ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಅನಂತಪುರಂ ಜೆಎಂಎಫ್ ಸಿ...
ಅನಂತಪುರಂ(ಆಂಧ್ರ): ಧಾರ್ಮಿಕ ಭಾವನೆಗೆ ದಕ್ಕೆ ತಂದ ಆರೋಪದಡಿಯಲ್ಲಿ ಟೀಂ ಇಂಡಿಯಾದ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಅನಂತಪುರಂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಅನಂತಪುರಂ ಕೋರ್ಟ್, ಮಹೇಂದ್ರ ಸಿಂಗ್ ಧೋನಿ ಫೆಬ್ರುವರಿ 25ರಂದು ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಿದೆ.
2013ರ ಏಪ್ರಿಲ್ 24ರಂದು ನಿಯತಕಾಲಿಕವೊಂದರಲ್ಲಿ ಮಹೇಂದ್ರ ಸಿಂಗ್ ಧೋನಿ ವಿಷ್ಣುವಿನ ಅವತಾರದಲ್ಲಿ ಶೂಗಳನ್ನು ಹಿಡಿದ ಚಿತ್ರವನ್ನು ಪ್ರಕಟಿಸಿತ್ತು. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ನ ಶ್ಯಾಮ್ ಸುಂದರ್ ಎಂಬವರು ಧೋನಿ ವಿರುದ್ಧ ದೂರು ದಾಖಲಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.