ಆಸ್ಟ್ರೇಲಿಯಾ ಪ್ರವಾಸ ಪಂದ್ಯಕ್ಕೆ ಶಮಿ ಅಲಭ್ಯ
ಶಮಿ ಅವರು ಎಡ ಮಂಡಿ ನೋವಿನಿಂದ ಬಳಲುತ್ತಿರುವ ಕಾರಣ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಪಂದ್ಯ ಮತ್ತು ಅದರ ನಂತರ ನಡೆಯಲಿರುವ ಟಿ 20...
ನವದೆಹಲಿ: ಆಸ್ಟ್ರೇಲಿಯಾ ಪ್ರವಾಸ ಪಂದ್ಯಕ್ಕೆ ಭಾರತದ ಬೌಲರ್ ಮೊಹಮ್ಮದ್ ಶಮಿ ಅಲಭ್ಯವಾಗಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.
ಶಮಿ ಅವರು ಎಡ ಮಂಡಿ ನೋವಿನಿಂದ ಬಳಲುತ್ತಿರುವ ಕಾರಣ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಪಂದ್ಯ ಮತ್ತು ಅದರ ನಂತರ ನಡೆಯಲಿರುವ ಟಿ 20 ಪಂದ್ಯಗಳಿಗೆ ಅಲಭ್ಯವಾಗಲಿದ್ದಾರೆ. ಅಷ್ಟೇ ಅಲ್ಲದೆ ನಾಲ್ಕರಿಂದ 6 ವಾರಗಳ ವರೆಗೆ ಅವರಿಗೆ ವಿಶ್ರಾಂತಿ ನೀಡಿದ್ದು, ಅವರು ಯಾವುದೇ ಕ್ರಿಕೆಟ್ ಪಂದ್ಯಗಳಲ್ಲಿ ಭಾಗಿಯಾಗುವುದಿಲ್ಲ. ಶಮಿ ಬದಲು ಭುವನೇಶ್ವರ್ ಕುಮಾರ್ ಅವರನ್ನು ತಂಡದಲ್ಲಿ ಸೇರಿಸಲಾಗಿದೆ ಎಂದು ಬಿಸಿಸಿಐ ಹೇಳಿಕೆ ನೀಡಿದೆ.