ಕ್ರೀಡೆ

ಅಜಿತ್ ಚಂಡೀಲಾಗೆ ಕ್ರಿಕೆಟ್‌ನಿಂದ ಆಜೀವ ನಿಷೇಧ

Lingaraj Badiger
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ರಾಜಸ್ಥಾನ ರಾಯಲ್ಸ್ ಪರ ಆಡಿದ್ದ ಕ್ರಿಕೆಟಿಗ ಅಜಿತ್ ಚಂಡೀಲಾ ಅವರಿಗೆ ಕ್ರಿಕೆಟ್‌ನಿಂದ ಆಜೀವ ನಿಷೇಧ ಹೇರಿದೆ.
ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ನೇತೃತ್ವದ ಶಿಸ್ತು ಪಾಲನಾ ಸಮಿತಿ, ಐಪಿಎಲ್ ಸೀಸನ್ 6ರ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆಟಗಾರರಿಗೆ ಶಿಕ್ಷೆ ವಿಧಿಸಿದ್ದು,
ಅಜಿತ್ ಚಂಡೀಲಾ ಅವರಿಗೆ ಆಜೀವ್ ನಿಷೇಧ ಹಾಗೂ ಹಿಕೇನ್ ಶಾ 5 ವರ್ಷಗಳ ನಿಷೇಧ ವಿಧಿಸಿ ಆದೇಶಿಸಿದೆ.
ಪ್ರಕರಣ ಸಂಬಂಧ 2013ರಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಆಟಗಾರರಾದ ಶ್ರೀಶಾಂತ್ ಅಂಕೀತ್ ಚವಾಣ್ ಹಾಗೂ ಅಜಿತ್ ಚಂಡೀಲಾ ಅವರ ಬಂಧಿಸಲಾಗಿತ್ತು.
SCROLL FOR NEXT