ಕ್ಯಾನ್ಬೇರ: ವೇಗವಾಗಿ 7 ಸಾವಿರ ಪೂರೈಸಿದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ ಇದೀಗ ವೇಗವಾಗಿ 25 ಶತಕ ಸಿಡಿಸಿದ ಪ್ರಥಮ ಆಟಗಾರ ಎನಿಸಿಕೊಂಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. 170 ಪಂದ್ಯಗಳನ್ನು ಆಡಿರುವ ಕೊಹ್ಲಿ 162ನೇ ಇನ್ನಿಂಗ್ಸ್ ನಲ್ಲಿ 25 ಶತಕಗಳನ್ನು ಸಿಡಿಸಿದ್ದಾರೆ.
ಅತಿ ಹೆಚ್ಚು ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಶ್ರೀಲಂಕಾದ ಆಟಗಾರ ಕುಮಾರ ಸಂಗಾಕ್ಕರ 404 ಪಂದ್ಯಗಲ್ಲಿ 25ನೇ ಶತಕ ಸಿಡಿಸಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದರು.