ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರೀಡೆ

ಟಿ20 ಪಂದ್ಯ: ಆಸ್ಟ್ರೇಲಿಯಾಗೆ 189 ರನ್ ಗಳ ಗುರಿ

ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 188 ರನ್ ಗಳನ್ನು ಸಿಡಿಸಿದ್ದು, ಆಸ್ಟ್ರೇಲಿಯಾಗೆ ಗೆಲ್ಲಲು 189 ರನ್ ಗಳ ಗುರಿ ನೀಡಿದೆ...

ವಿರಾಟ್ ಕೊಹ್ಲಿ
Vishwanath S
Updated On : 26 Jan 2016, 5:50 am

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 188 ರನ್ ಗಳನ್ನು ಸಿಡಿಸಿದ್ದು, ಆಸ್ಟ್ರೇಲಿಯಾಗೆ ಗೆಲ್ಲಲು 189 ರನ್ ಗಳ ಗುರಿ ನೀಡಿದೆ.

ಅಡಿಲೇಡ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಆಟಗಾರರ ಉತ್ತಮ ಬ್ಯಾಟಿಂಗ್ ನಿಂದಾಗಿ 188 ರನ್ ಕಲೆ ಹಾಕಿತು. ಅಜೇಯ 90ರನ್ ಗಳಿಸಿದ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಚೊಚ್ಚಲ ಶತಕ ಗಳಿಸುವ ಅವಕಾಶ ಕಳೆದುಕೊಂಡರು.

ಭಾರತ ತಂಡ ಆರಂಭಿಕ ರೋಹಿತ್ ಶರ್ಮ 31, ಶಿಖರ್ ಧವನ್ 5 ಹಾಗೂ ಸುರೇಶ್ ರೈನಾ 41 ರನ್ ಗಳಿಗೆ ಔಟಾದರು. ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ವಿರಾಟ್ ಕೊಹ್ಲಿ (55ಎಸೆತ, 90*ರನ್, 9ಬೌಂಡರಿ, 2ಸಿಕ್ಸರ್) ಅವರ ಅತ್ಯಾಕರ್ಷಕ ಆಟ ಪ್ರದರ್ಶಿಸಿದರು. ಸುರೇಶ್ ರೈನಾ ಬಳಿಕ ಬಂದ ಧೋನಿ ಅಜೇಯ 11 ರನ್ ಗಳಿಸಿದರು.

ಆಸ್ಟ್ರೇಲಿಯಾ ಪರ ವಾಟ್ಸನ್ 2 ಹಾಗೂ ಫಾಲ್ಕನರ್ 1ವಿಕೆಟ್ ಪಡೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments