ಆಸ್ಟ್ರೇಲಿಯಾ ಓಪನ್: ಫೈನಲ್ ಗೆ ಲಗ್ಗೆಯಿಟ್ಟ ಸಾನಿಯಾ-ಹಿಂಗೀಸ್ ಜೋಡಿ
ವಿಶ್ವದ ನಂಬರ್ 1 ಟೆನ್ನಿಸ್ ಜೋಡಿ ಭಾರತದ ಖ್ಯಾತ ಸಾನಿಯಾ ಮಿರ್ಜಾ ಮತ್ತು ಸ್ವಿಜರ್ಲೆಂಡ್ನ ಮಾರ್ಟಿನಾ ಹಿಂಗೀಸ್ ಜೋಡಿ ಆಸ್ಟ್ರೇಲಿಯನ್ ಓಪನ್ ಟೆನಿಸ್...
ಮೊಲ್ಬೋರ್ನ್: ವಿಶ್ವದ ನಂಬರ್ 1 ಟೆನ್ನಿಸ್ ಜೋಡಿ ಭಾರತದ ಖ್ಯಾತ ಸಾನಿಯಾ ಮಿರ್ಜಾ ಮತ್ತು ಸ್ವಿಜರ್ಲೆಂಡ್ನ ಮಾರ್ಟಿನಾ ಹಿಂಗೀಸ್ ಜೋಡಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಫೈನಲ್ ಪ್ರವೇಶಿಸಿದ್ದಾರೆ.
13ನೇ ಶ್ರೇಯಾಂಕದ ಜೂಲಿಯಾ ಜಾರ್ಜಸ್ ಮತ್ತು ಕ್ಯಾರೊಲಿನಾ ಪ್ಲಿಸ್ಕೋವಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸಾನಿಯಾ ಜೋಡಿ ರೋಚಕ ಜಯ ದಾಖಲಿಸಿ 3ನೇ ಬಾರಿಗೆ ಆಸ್ಟ್ರೇಲಿಯಾ ಓಪನ್ ಟೂರ್ನಿಯ ಫೈನಲ್ ಪ್ರವೇಶಿಸಿದ್ದಾರೆ.
ಸುಮಾರು 27 ನಿಮಿಷಗಳ ಕಾಲ ನಡೆದ ಈ ಪಂದ್ಯದಲ್ಲಿ ಆರಂಭದಿಂದಲೂ ಮೇಲುಗೈ ಸಾಧಿಸಿದ ಈ ಜೋಡಿ ಜಾರ್ಜಸ್ ಮತ್ತು ಕ್ಯಾರೊಲಿನಾ ಪ್ಲಿಸ್ಕೋವಾ ಜೋಡಿಯನ್ನು 6-1, 6-0 ನೇರ ಸೆಟ್ ಗಳ ಅಂತರದಿಂದ ಸೋಲಿಸಿದ್ದಾರೆ.
ಆಸ್ಟ್ರೇಲಿಯಾ ಓಪನ್ ಫೈನಲ್ ಪಂದ್ಯದಲ್ಲಿ ಈ ಜೋಡಿ 7ನೇ ಶ್ರೇಯಾಂಕದ ಆಂಡ್ರಿಯಾ ಮತ್ತು ಲೂಸೀ ಹಾರ್ಡೇಕ್ಕ್ ಅವರನ್ನು ಎದುರಿಸಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.