ಭಾರತ ಮಹಿಳಾ ತಂಡ 
ಕ್ರೀಡೆ

ಟಿ20: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಜಯ, ಭಾರತೀಯ ಮಹಿಳಾ ತಂಡಕ್ಕೆ ಸರಣಿ ಜಯ

ಆಸ್ಟ್ರೇಲಿಯಾ ವಿರುದ್ದದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಅತ್ಯುತ್ತಮವಾಗಿ ಆಡಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಸರಣಿ ಕೈವಶ...

ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ದದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಅತ್ಯುತ್ತಮವಾಗಿ ಆಡಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಸರಣಿ ಕೈವಶ ಮಾಡಿಕೊಂಡಿದೆ.

ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಟಿ 20 ಸರಣಿಯನ್ನು 2-0 ಅಂತರದಿಂದ ಗೆದ್ದು ಭಾರತೀಯ ಮಹಿಳಾ ಕ್ರಿಕೆಟ್ ತಂಡ ಐತಿಹಾಸಿಕ ಸಾಧನೆ ಮಾಡಿದೆ.

ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡವು, ಜೂಲನ್ ಗೋಸ್ವಾಮಿ ಮತ್ತು ಕನ್ನಡತಿ ರಾಜೇಶ್ವರಿ ಗಾಯಕ್​ವಾಡ್ ಅವರ ನಿಖರ ಬೌಲಿಂಗ್​ನಿಂದ ಆಸ್ಟ್ರೇಲಿಯಾವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಿತು. ಮಳೆಯಿಂದ ಆಟ ತಡವಾಗಿ ಆರಂಭವಾದ ಕಾರಣ ಪಂದ್ಯವನ್ನು 18 ಓವರ್​ಗಳಿಗೆ ಇಳಿಕೆ ಮಾಡಲಾಯಿತು. ಆಸ್ಟ್ರೇಲಿಯಾ ಅಂತಿಮವಾಗಿ 18 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿತು.

126 ರನ್ ಗುರಿ ಬೆನ್ನತ್ತಿದ ಭಾರತವು ಉತ್ತಮ ಆರಂಭವನ್ನು ಪಡೆಯಿತು. ಈ ಹಂತದಲ್ಲಿ ಮತ್ತೆ ಮಳೆ ಸುರಿದ ಕಾರಣ ಪಂದ್ಯವನ್ನು 10 ಓವರ್​ಗಳಿಗೆ ಇಳಿಕೆ ಮಾಡಿ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಭಾರತಕ್ಕೆ ಗೆಲ್ಲಲು 66 ರನ್ ಗುರಿ ನಿಗದಿ ಪಡಿಸಲಾಯಿತು. ಸುಲಭದ ಗುರಿಯನ್ನು ಬೆನ್ನತ್ತಿದ ಮಿಥಾಲಿ ರಾಜ್ (37) ಮತ್ತು ಸ್ಮೃತಿ ಮಂದನ (22) ರನ್ ಗಳಿಸಿ ಜಯ ತಂದರು. ಅಂತಿಮವಾಗಿ ಭಾರತ 9.1 ಓವರ್​ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 69 ರನ್ ಗಳಿಸಿ ಜಯ ಪಡೆಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ