ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೂರನೇ ಪಂದ್ಯವನ್ನು ಕೈಚೆಲ್ಲಿರುವ ಭಾರತ ಕ್ರಿಕೆಟ್ ಮಹಿಳಾ ತಂಡದ ಕ್ಲೀನ್ ಸ್ವಿಪ್ ಕನಸು ಭಗ್ನಗೊಂಡಿದೆ.
ಸಿಡ್ನಿಯಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಮಹಿಳಾ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಆಟಗಾರರು ನಿಗದಿತ ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿದರು.
137 ರನ್ ಗಳ ಬೆನ್ನಟ್ಟಿದ ಭಾರತ ಕ್ರಿಕೆಟ್ ಮಹಿಳಾ ತಂಡ 8 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತು. ಇದರೊಂದಿಗೆ ಆಸ್ಟ್ರೇಲಿಯಾ 15 ರನ್ ಗಳಿಂದ ಜಯ ಗಳಿಸಿತು.